ಧಾರವಾಡ: ಎನ್.ಎಸ್.ಎಸ್.ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಭಾಜನರಾದ ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಹೆಗಡೆ ಅವರನ್ನು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ.ಲಿಂಗರಾಜ ಅಂಗಡಿ ಹೃತ್ಪೂರ್ವಕವಾಗಿ ಸನ್ಮಾನಿಸಿದರು. ಪರಿಷತ್ ಗೌರವ ಕಾರ್ಯದರ್ಶಿಗಳಾದ ಪ್ರೊ.ಕೆ.ಎಸ್.ಕೌಜಲಗಿ, ಹುಬ್ಬಳ್ಳಿಯ ಶ್ರೀ ಮಹಾವೀರ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಪ್ರೊ.ಎಸ್.ಕೆ.ಆದಪ್ಪನವರ್, ಸಿ.ಜಿ.ಧಾರವಾಡ ಶೆಟ್ಟರ್ ಮೊದಲಾದವರು ಉಪಸ್ಥಿತರಿದ್ದರು.
ಧಾರವಾಡ ಜಿಲ್ಲಾ ಕ.ಸಾ.ಪ.ದಿಂದ ಡಾ.ಬಾಲಕೃಷ್ಣ ಹೆಗಡೆಗೆ ಸನ್ಮಾನ
