• Slide
    Slide
    Slide
    previous arrow
    next arrow
  • ಫೆಲೋಶಿಫ್‌ಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಎಂ.ಫಿಲ್ ಹಾಗೂ ಪಿಎಚ್‌ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಪಿಎಚ್‌ಡಿ 3 ವರ್ಷ ಹಾಗೂ ಎಂಫಿಲ್ 2 ವರ್ಷ ಅವಧಿಗೆ ಪ್ರತಿ ಮಾಹೆಯಾನ ಫೆಲೋಶಿಪ್ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿದ್ಯಾರ್ಥಿಯು ಕರ್ನಾಟಕದ ನಿವಾಸಿಯಾಗಿದ್ದು, ಮತೀಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು, ವಯಸ್ಸು 35 ವರ್ಷಕ್ಕಿಂತ ಕಡಿಮೆ ಇರಬೇಕು, ಕುಟುಂಬದ ವಾರ್ಷಿಕ ಆದಾಯ ರೂ.8 ಲಕ್ಷ ಮೀರಿರಬಾರದು, ವಿದ್ಯಾರ್ಥಿಯು ಯಾವುದೇ ಸರ್ಕಾರಿ ಉದ್ಯೋಗಿಯಾಗಿರಬಾರದು, ಇತರೇ ಮೂಲದಿಂದ ಯಾವುದೇ ಫೆಲೋಶಿಪ್, ವಿದ್ಯಾರ್ಥಿವೇತನ ಪಡೆಯುತ್ತಿರಬಾರದು. ಅರ್ಜಿ ಸಲ್ಲಿಸಿದ ಹಾರ್ಡ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ವಿಶ್ವವಿದ್ಯಾಲಯದ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿಗೆ ಸಲ್ಲಿಸಬೇಕು.

    300x250 AD

    ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ತಂತ್ರಾ0ಶದಲ್ಲಿ https://sevasindhu.karnataka.gov.in ಅ.3ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ https://dom.karnataka.gov.in/uttara_kannada/public/ ಅಥವಾ ಹತ್ತಿರದ ಗ್ರಾಮಒನ್ ಕೇಂದ್ರಕ್ಕೆ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ, ತಾಲೂಕಾ ವಿಸ್ತರಣಾಧಿಕಾರಿಗಳ ಕಛೇರಿ ಹಾಗೂ ಎಲ್ಲಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದ್ದು, ಸಹಾಯವಾಣಿ ಸಂಖ್ಯೆ: tel:+918277799990/ tel:+9108382220336ನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರ ಪ್ರಕಟಣೆ ತಿಳಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top