Slide
Slide
Slide
previous arrow
next arrow

1.18 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ; ಈರ್ವರು ಪೊಲೀಸರ ವಶಕ್ಕೆ

300x250 AD

ಕಾರವಾರ: ಅಕ್ರಮವಾಗಿ ಗೋವಾ ಸಾರಾಯಿ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ಖಾಪ್ರಿ ದೇವಸ್ಥಾನದ ಬಳಿ ಟಾಟಾಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 1.18 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರವಾರ ಮೂಲದ ಸಂತೋಷ್ ಹಾಗೂ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಮೂಲದ ಪ್ರಸಾದ ದೇಸಾಯಿ ಮದ್ಯ ಸಾಗಿಸುತ್ತಿದ್ದ ಆರೋಪಿಗಳಾಗಿದ್ದು, ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ಮಿಥುನ್ ನಾಯ್ಕ ಎನ್ನುವ ಆರೋಪಿ ಪರಾರಿಯಾಗಿದ್ದಾನೆ.
ದಾಳಿಯಲ್ಲಿ ಪೊಲೀಸರು 750 ಎಂಎಲ್‌ನ 504 ಗೋವಾ ಫೆನ್ನಿ ಬಾಟಲಿಗಳು, 288 ವಿಸ್ಕಿ ಬಾಟಲಿಗಳು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದು, ತಪ್ಪಿಸಿಕೊಂಡ ಆರೋಪಿಯ ಬಂಧನಕ್ಕೆ ಪೊಲೀಸರು ಜಾಡು ಬೀಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top