Slide
Slide
Slide
previous arrow
next arrow

ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಮಗು ಕೂಡ ಶಿಕ್ಷಣ ಪಡೆಯಬೇಕು: ಭೀಮಣ್ಣ ನಾಯ್ಕ್

300x250 AD


ಸಿದ್ದಾಪುರ: ಶಿಕ್ಷಣದ ಮೂಲಕ ಮಾತ್ರ ದೇಶ ಹಾಗೂ ಸಮಾಜದ ಪ್ರಗತಿ ಕಾಣಲು ಸಾಧ್ಯ. ಯಾವ ಮಗುವು ಕೂಡ ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಪ್ರತಿ ಮಗು ಕೂಡ ಶಿಕ್ಷಣ ಪಡೆಯಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಅವರು ಪಟ್ಟಣದ ಶಂಕರಮಠದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವಾರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಗುರು ಸನ್ಮಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಈ ವೇಳೆ ತಹಶೀಲ್ದಾರ ಎಂ.ಆರ್.ಕುಲಕರ್ಣಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ, ಪ್ರಧಾನಮಂತ್ರಿ ಪೋಷಣಾ ಅಭಿಯಾನದ ಸಹಾಯಕ ನಿರ್ದೇಶಕ ಭೂಮೇಶ್ ಎ.ಎಚ್., ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವಿ.ನಾಯ್ಕ, ತಾಲೂಕಾ ಕಸಾಪ ಅಧ್ಯಕ್ಷ ಗೋಪಾಲ ಭಾಶಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್.ಪಮ್ಮಾರ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಲೋಕೇಶ ನಾಯ್ಕ, ಪಿಯುಸಿ ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜಪ್ಪ ಎಂ.ಜಿ., ಶಿಕ್ಷಣ ಸಂಯೋಜಕ ಮಹೇಶ ಹೆಗಡೆ ಉಪಸ್ಥಿತರಿದ್ದರು.
ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಸ್ವಾಗತಿಸಿದರು. ಶಿಕ್ಷಕರಾದ ಗೀತಾ ಬಿ.ಸಿ, ಶೃತಿ ಪಟಗಾರ ನಿರೂಪಿಸಿದರು. ಶಿಕ್ಷಕಿ ನಾಗರತ್ನಾ ನಾಯ್ಕ ಸಂಗಡಿಗರು ಪ್ರಾರ್ಥಿಸಿದರು. ಮೇಧಾ ಹೆಗಡೆ ಸಂಗಡಿಗರು ನಾಡಗೀತೆ ಹಾಡಿದರು. ಚೈತನ್ಯಕುಮಾರ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top