ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕ್ಯಾಂಪ್’ನಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಜಮ್ಯಾಂಗ್ ದಕ್ಪಾ (35) ಎಂಬಾತನೇ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಟಿಬೇಟಿಯನ್ ಮಾಜಿ ಸೈನಿಕ ಗೊಂಪೋ ಚೀಡಾಕ್ ಚಾಕು ಇರಿದು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಘಟನೆಯಲ್ಲಿ ಆರೋಪಿಗೂ ಗಾಯವಾಗಿದ್ದು, ಆತನಿಗೆ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.