• Slide
    Slide
    Slide
    previous arrow
    next arrow
  • ಜಿಲ್ಲೆಯ ಪ್ರಗತಿಗೆ ಒಟ್ಟಾಗಿ ಕಾರ್ಯನಿರ್ವಹಿಸಿ: ಡಿಸಿ ಕಿವಿಮಾತು

    300x250 AD

    ಕಾರವಾರ: ಜಿಲ್ಲೆಯ ಎಲ್ಲಾ ಇಲಾಖಾಧಿಕಾರಿಗಳು ತಮಗೆ ನಿಗದಿಪಡಿಸಿದ ಗುರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಜಿಲ್ಲೆಯ ಪ್ರಗತಿಗಾಗಿ ಪರಸ್ಪರ ಸಮನ್ವಯದಿಂದ ಒಂದು ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಕಿವಿಮಾತು ಹೇಳಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ದೊರೆಯುವಂತೆ ನೋಡಿಕೊಳ್ಳಬೇಕು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸರಿಯಾಗಿ ತಲುಪುವಂತೆ ಹಾಗೂ ಯಾವುದೇ ಅರ್ಹ ವ್ಯಕ್ತಿ ಸೌಲಭ್ಯದಿಂದ ವಂಚಿತರಾಗದ0ತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

    ಇಲಾಖೆಗಳಲ್ಲಿ ಅಧೀನ ಸಿಬ್ಬಂದಿಗಳಿಗೆ ನಿಗಧಿತ ಅವಧಿಯೊಳಗೆ ತಮಗೆ ನೀಡಿರುವ ಕೆಲಸವನ್ನು ಮುಗಿಸುವಂತೆ ಗುರಿ ನೀಡುವುದರ ಮೂಲಕ ಸಕಾಲದಲ್ಲಿ ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ದೊರೆಯುವಂತೆ ನೋಡಿಕೊಳ್ಳಬೇಕು ಎಂದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳನ್ನು ಜಾರಿಗೊಳಿಸುವಾಗ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ನಾಗರೀಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಿ ಎಂದರು.

    300x250 AD

    ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಳಂಬಕ್ಕೆ ಆಸ್ಪದ ನೀಡದೇ ಕಡತಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ತಿಳಿಸಿದ ಅವರು, ಆಡಳಿತದಲ್ಲಿ ಪಾರದರ್ಶಕತೆಗೆ ಒತ್ತು ನೀಡುವಂತೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳು ಯಾವುದೇ ಸಮಯದಲ್ಲಿ ತಮ್ಮನ್ನು ನೇರವಾಗಿ ಸಂಪರ್ಕಿಸುವ0ತೆ ತಿಳಿಸಿದರು.
    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಖಂಡೂ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top