Slide
Slide
Slide
previous arrow
next arrow

ಎರಡನೇ ಹಂತದ ಮಿಷನ್ ಇಂದ್ರಧನುಷ್ ಸಂಪೂರ್ಣ ಗುರಿ ಸಾಧಿಸಲು ಡಿಸಿ ಸೂಚನೆ

300x250 AD

ಕಾರವಾರ: ಜಿಲ್ಲೆಯಲ್ಲಿ ಮಾರಕ ರೋಗಗಳ ವಿರುದ್ದ ಮಕ್ಕಳನ್ನು ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನುಸಾರ, ವಯಸ್ಸಿಗನುಗುಣವಾಗಿ ಲಸಿಕೆ ಪಡೆಯದ/ ಬಿಟ್ಟು ಹೋದ/ವಂಚಿತ ಮತ್ತು ಲಸಿಕಾಕರಣಕ್ಕೆ ಬಾಕಿ ಇರುವ ಜಿಲ್ಲೆಯ ಗರ್ಭಿಣಿಯರು ಹಾಗೂ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ, ಎರಡನೇ ಹಂತದ ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮವು ಸೆಪ್ಟಂಬರ್ 11 ರಿಂದ 16 ರ ವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಗುರಿ ಸಾಧಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಎರಡನೇ ಸುತ್ತಿನ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದ್ರಧನುಷ್ ಕಾರ್ಯಕ್ರಮದಲ್ಲಿ, ರಾಷ್ಟ್ರೀಯ ಲಸಿಕಾ ವೇಳಾಪಟ್ಟಿಯನ್ವಯ 0-5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ನಿಗಧಿತ ಅವಧಿಯಲ್ಲಿ ನೀಡಬೇಕಾದ ಎಲ್ಲಾ ಲಸಿಕೆಗಳನ್ನು ತಪ್ಪದೇ ನೀಡುವಂತೆ ಹಾಗೂ ಜಿಲ್ಲೆಯ ಯಾವುದೇ ಗರ್ಭಿಣಿ ಮತ್ತು ಮಗು ಲಸಿಕೆಯಿಂದ ವಂಚಿತರಾಗದ0ತೆ ಹಾಗೂ ಲಸಿಕೆ ವಂಚಿತರಾಗಿ ಯಾವುದೇ ರೋಗಗಳಿಗೆ ತುತ್ತಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಎರಡನೇ ಹಂತದ ತೀವ್ರತರವಾದ ಮಿಷನ್ ಇಂದ್ರಧನುಷ್ ಕಾರ್ಯಕ್ರಮದಲ್ಲಿ ಜಿಲ್ಲೆಯ 520 ಗರ್ಭಿಣಿಯರು, 2 ವರ್ಷದೊಳಗಿನ 2788 ಮಕ್ಕಳು, 2 ರಿಂದ 5 ವರ್ಷದೊಳಗಿನ 361 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಈ ಕಾರ್ಯಕ್ಕಾಗಿ ಅಗತ್ಯವಿರುವ ಸಿಬ್ಬಂದಿಗಳನ್ನು ಬಳಸಿಕೊಂಡು, ಶೇ.100 ಗುರಿ ಸಾಧನೆ ಮಾಡಬೇಕು ಎಂದು ಸೂಚಿಸಿದರು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕ ಲಸಿಕೆಗೆ ಅರ್ಹವಾಗಿರುವ ಮತ್ತು ಈಗಾಗಲೇ ಲಸಿಕೆ ವಂಚಿತರಾಗಿರುವವರನ್ನು ಗುರುತಿಸಿ ಲಸಿಕೆ ನೀಡಿ, ವಲಸೆ ಕಾರ್ಮಿಕರು ಇರುವ ಪ್ರದೇಶಗಳಲ್ಲಿ ಕಾರ್ಮಿಕ ಇಲಾಖೆಯ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದರು.
ಮಿಷನ್ ಇಂದ್ರ ಧನುಷ್ ಕಾರ್ಯಕ್ರಮದ ಮೂಲಕ, ದಡಾರ ರೂಬೆಲ್ಲಾ ರೋಗದಿಂದ ಮಕ್ಕಳಿಗೆ ಹಾನಿಯಾಗುವುದನ್ನು ತಪ್ಪಿಸಲು ಮತ್ತು ಸಾರ್ವತ್ರಿಕ ಲಸಿಕೆಯಲ್ಲಿ ಇತ್ತೀಚೆಗೆ ಸೇರ್ಪಡೆಗೊಂಡ ಪಿವಿಸಿ ಲಸಿಕೆ, ಡಿಪಿಟಿ ಬೂಸ್ಟರ್ ಡೋಸ್, ಓಪಿವಿ ಬೂಸ್ಟರ್ ಡೋಸ್ ಸೇರಿದಂತೆ ಮಾರಕ ರೋಗಗಳಿಂದ ಮಕ್ಕಳು ಮತ್ತು ಗರ್ಭಿಣಿಯರನ್ನು ರಕ್ಷಿಸಲು ಉದ್ದೇಶಿಸಿದ್ದು, ಸಾರ್ವಜನಿಕರು ತಮ್ಮ ಮಕ್ಕಳಿಗೆ ಈ ಅಗತ್ಯ ಲಸಿಕೆಗಳನ್ನು ತಪ್ಪದೇ ಕೊಡಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

300x250 AD

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆರೋಗ್ಯ ಇಲಾಖೆ ಮತ್ತು ಸಂಬಂಧಪಟ್ಟ ಇಲಾಖೆಗಳು ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು, ಲಸಿಕಾ ಶಿಬಿರಗಳು ನಡೆಯುವ ದಿನಾಂಕ ಮತ್ತು ಸ್ಥಳದ ಮಾಹಿತಿಯನ್ನು ಸಾಕಷ್ಟು ಮುಂಚಿತವಾಗಿ ಪೋಷಕರಿಗೆ ತಿಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕಿ ಹೆಚ್.ಹೆಚ್. ಕುಕನೂರ , ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top