• Slide
    Slide
    Slide
    previous arrow
    next arrow
  • ಸರ್ಕಾರಿ ಕೆಲಸಕ್ಕೆ ಹಣ ಪಡೆಯುವ ಅಧಿಕಾರಿಗಳಿಗೆ ಭೀಮಣ್ಣ ಖಡಕ್ ಎಚ್ಚರಿಕೆ

    300x250 AD

    ಶಿರಸಿ: ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಉಪನೋಂದಣಿ ಕಚೇರಿಯಲ್ಲಿ ಜನರ ಕೆಲಸಗಳಿಗೆ ಹಣ ಕೋಡಬೇಕಾದ ಸ್ಥಿತಿ ಇದೆ ಎಂದು ದೂರುಗಳು ಬರುತ್ತಿವೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲ್ಲ. ಅಂತಹ ಅಧಿಕಾರಿಗಳು ನನ್ನ ಕ್ಷೇತ್ರಕ್ಕೆ ಅಗತ್ಯವಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

    ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ, ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಆಗುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಕಡತ ವಿಲೇವಾರಿಗೆ ಹಣ ಕೇಳುತ್ತಿದ್ದಾರೆ ಎಂಬ ಲಿಖಿತ ದೂರುಗಳು ಸಾಕಷ್ಟು ಬಂದಿದೆ. ಅದರಲ್ಲೂ ವಿಶೇಷವಾಗಿ ಉಪ ನೋಂದಣಿ ಕಚೇರಿಯಲ್ಲಿ ಕೆಲಸಗಳಿಗೆ ಹಣ ಕೇಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಎಂದು ಉಪ ನೋಂದಣಾ ಅಧಿಕಾರಿ ಎಂ.ವಿ.ರಾಧಾ ಅವರ ವಿರುದ್ಧ ಸಿಡಿಮಿಡಿಗೊಂಡರು. ಅರಣ್ಯ ಅತಿಕ್ರಮಣದಾರರಿಗೆ ಯಾವುದೇ ಸಮಸ್ಯೆ ಆಗಬಾರದು. ಜಿಪಿಎಸ್ ಮಾಡಿದ ಜಾಗದಲ್ಲಿ ಕೃಷಿ, ತೋಟಗಾರಿಕೆ ಚಟುವಟಿಕೆ ನಡೆಸಿದರೆ ತೊಂದರೆ ನೀಡಬೇಡಿ ಎಂದು ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಗಸ್ಟ್ ತಿಂಗಳಿನಿ0ದ ಇಂದಿನವರೆಗೆ 17 ಸೆಂಟಿ ಮೀಟರ್ ಮಳೆಯಾಗಿದೆ. ಬಿತ್ತನೆ ಹಾಗೂ ನಾಟಿ ಮಾಡಿದ ಬೆಳೆಗಳಿಗೆ ನೀರಿನ ಕೊರತೆ ಉಂಟಾಗಿದೆ. 23 ಗ್ರಾಮಗಳಲ್ಲಿ ಬರ ಸಮೀಕ್ಷೆ ನಡೆಸಿ ವರದಿ ನೀಡಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿ ಸಭೆಯಲ್ಲಿ ತಿಳಿಸಿದರು.
    ಉಪವಿಭಾಗಾಧಿಕಾರಿ ದೇವರಾಜ್ ಆರ್., ತಹಶೀಲ್ದಾರ ಶ್ರೀಧರ ಮುಂದಲಮನಿ, ಡಿವೈಎಸ್ಪಿ ಗಣೇಶ ಕೆ.ಎಲ್. ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top