• Slide
    Slide
    Slide
    previous arrow
    next arrow
  • ಶ್ರೀನಿಕೇತನ ಶಾಲೆಯಲ್ಲಿ ವಿಶಿಷ್ಟವಾಗಿ ಶಿಕ್ಷಕರ ದಿನ ಆಚರಣೆ

    300x250 AD

    ಶಿರಸಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಇಸಳೂರಿನ ಶ್ರೀನಿಕೇತನ ಶಾಲೆಯಲ್ಲಿ ಮಂಗಳವಾರ ಶಿಕ್ಷಕರ ದಿನವನ್ನು ಆಚರಿಸಲಾಯಿತು.

    ಈ ಕಾರ್ಯಕ್ರಮಕ್ಕೆ ಶಾಲೆಯ ಆಡಳಿತ ಮಂಡಳಿಯ ಸದಸ್ಯರು ಆಗಮಿಸಿದ್ದು, ಇವರ ಉಪಸ್ಥಿತಿಯಲ್ಲಿ ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರನ್ನು ಗೌರವಿಸಲಾಯಿತು. ಹತ್ತನೇ ತರಗತಿಯ ಮಕ್ಕಳು ಶಿಕ್ಷಕರಿಗಾಗಿ ಅನೇಕ ಮನೋರಂಜನಾ ಕಾರ್ಯಕ್ರಮ ಮತ್ತು ಸ್ಪರ್ಧೆಗಳನ್ನು ಏರ್ಪಡಿಸಿದ್ದರು.

    300x250 AD

    ಶಿಕ್ಷಕ ದಿನಾಚರಣೆಯ ಪ್ರಯುಕ್ತ ರೋಟರಿ ಸೇವಾ ಪ್ರತಿಷ್ಠಾನದವರು ಏರ್ಪಡಿಸಿದ್ದ ‘ಇಕೋ ಫ್ರೆಂಡ್ಲಿ ಇಂಡಿಪೆAಡೆAನ್ಸ್ ಡೇ’ ಸ್ಪರ್ಧೆಯಲ್ಲಿ ಭಾಗವಹಿಸಿದ ಶಾಲೆಯ ೮ನೇ ತರಗತಿಯ ಕ್ರಿಶ್ಟಾ ಹಾಗೂ ತ್ರಿಮುಖ, ೯ನೇ ತರಗತಿಯ ಅಪೂರ್ವ ಹಾಗೂ ಚಂದನಾ ಇವರು ಮೊದಲನೇ ಸ್ಥಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top