ಕಾರವಾರ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳು ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡುವ ಕುರಿತು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 21-35 ವರ್ಷದೊಳಗಿದ್ದು, ಪದವಿ ಅರ್ಜಿ ಸಲ್ಲಿಸುವ ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಅಥವಾ ಪದವಿ ಹೊಂದಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಇಲಾಖಾ ವೆಬ್‌ಸೈಟ್‌ನಲ್ಲಿ ನೀಡಲಾಗುವ ಮಾಹಿತಿಯು ಅಧಿಕೃತ ಮತ್ತು ಅಂತಿಮವಾಗಿದೆ. ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್: https://sevasindhu.karnataka.gov.in ಮೂಲಕ ಸೆ.16ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್: https://dom.karnataka.gov.in/ ಅಥವಾ ತಮ್ಮ ತಾಲೂಕಿನ ಅಲ್ಪಸಂಖ್ಯಾತರ ತಾಲೂಕ ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರವಾರ ದೂರವಾಣಿ ಸಂಖ್ಯೆ tel:+9108382220336 ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ tel:+918277799990 ನ್ನು ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.