• Slide
  Slide
  Slide
  previous arrow
  next arrow
 • ವಿವಿಧ ಯೋಜನೆಗಳಡಿ ಸಾಲ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

  300x250 AD

  ಕಾರವಾರ: ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಲ್ಲಿ ಖಾಯಂ ವಾಸಿಸುತ್ತಿರುವ ಮತೀಯ ಅಲ್ಪಸಂಖ್ಯಾತರರ ಅಭಿವೃದ್ಧಿಗಾಗಿ ಮತೀಯ ಅಲ್ಪಸಂಖ್ಯಾತರಿ0ದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಪಂಗಡಕ್ಕೆ ಸೇರಿದವರು ಅರ್ಹರಾಗಿದ್ದಾರೆ. 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುವ ಶ್ರಮಶಕ್ತಿ ಸಾಲದ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ವೃತ್ತಿಪ್ರೋತ್ಸಾಹ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸಮುದಾಯ ಆಧಾರಿತ ತರಬೇತಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್: https://kmdconline.karnataka.gov.in ಮೂಲಕ ಸೆ.25ರೊಳಗಾಗಿ ಸಲ್ಲಿಸಬಹುದು. ಭರ್ತಿಮಾಡಿದ ಅರ್ಜಿ/ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, 1ನೇ ಮಹಡಿ, ವಾಸೀಂ ಮಂಜಿಲ್, ಹೈಚರ್ಚ ರಸ್ತೆ, ಕಾರವಾರ-581301 ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕಚೆರಿಯ ದೂರವಾಣಿ ಸಂಖ್ಯೆ: tel:+9108382221180ಸಂಪರ್ಕಿಸಬಹುದಾಗಿದೆ.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top