• Slide
    Slide
    Slide
    previous arrow
    next arrow
  • ಜಾನಪದ ತಂಡಗಳಿಂದ ಅರ್ಜಿ ಆಹ್ವಾನ

    300x250 AD

    ಕಾರವಾರ: ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಲಾಖೆ ಯೋಜನೆ ಹಾಗೂ ಸೇವೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸಲು ಜಾನಪದ ಕಲಾತಂಡಗಳಿಂದ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ನೀಡಲು ಆಯ್ಕೆ ಅರ್ಜಿ ಆಹ್ವಾನಿಸಲಾಗಿದೆ.

    ಕಲಾತಂಡಗಳು ಜಿಲ್ಲೆಯ ವ್ಯಾಪ್ತಿಯಲ್ಲಿ ಇರಬೇಕು, ಸಂಗೀತ ಮತ್ತು ನಾಟಕ ವಿಭಾಗ ಮಾಹಿತಿ ಮತ್ತು ಪ್ರಸಾರ ಮಂತ್ರಾಲಯ ಭಾರತ ಸರಕಾರ ಬೆಂಗಳೂರು ಕೇಂದ್ರದಲ್ಲಿ ನೊಂದಣಿ ಆಗಿರಬೇಕು ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳಲ್ಲಿ ಯಾವುದಾದರೂ ಒಂದು ಇಲಾಖೆಯಲ್ಲಿ ನೊಂದಣಿಯಾಗಿರುವ ಕಲಾತಂಡಗಳನ್ನು ಮಾತ್ರ ಪರಿಗಣಿಸಲಾಗುವುದು. ಆಯ್ಕೆಯಾದ ಕಲಾತಂಡಗಳು ಜಿಲ್ಲೆಯಾದ್ಯಂತ ತಮ್ಮ ಪ್ರಕಾರಗಳಲ್ಲಿ ಕಾರ್ಯಕ್ರಮ ನೀಡಲು ಸಿದ್ಧರಾಗಿರಬೇಕು.
    ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಕಛೇರಿ ಅವಧಿಯಲ್ಲಿ ಆರೋಗ್ಯ ಶಿಕ್ಷಣ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಪಡೆದು, ತಮ್ಮ ತಂಡದ ಪ್ರಕಾರ ಹಾಗೂ ನೋಂದಣಿ ದಾಖಲೆ ಪ್ರತಿಗಳೊಂದಿಗೆ ಸೆ.15ರೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಯ ಆರೋಗ್ಯ ಶಿಕ್ಷಣ ವಿಭಾಗಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೂರವಾಣಿ ಸಂಖ್ಯೆ: tel:+919845198326ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನೀರಜ್ ಬಿ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top