ಸಾಗರ: ಇಲ್ಲಿನ ನೌಕರರ ಭವನದಲ್ಲಿ ಆ.29 ರವಿವಾರ ಸೇರಿದ ಅಖಿಲ ಕರ್ನಾಟಕ ಚನ್ನಯ್ಯ (ಬಲಗೈ) ಸಮಾಜ ಅಭಿವೃದ್ಧಿ ಹೋರಾಟ ಸಮಿತಿಯ ಸಭೆಯಲ್ಲಿ ಬಸವರಾಜ ದೊಡ್ಮನಿ ಅವರನ್ನು ಸರ್ವಾನುಮತದಿಂದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಇವರನ್ನು ಆಯ್ಕೆ ಮಾಡಲು ಸಹಕರಿಸಿದ ರಾಜ್ಯ ಸಮಿತಿಯ ಗೌರವಾಧ್ಯಕ್ಷರು, ಕಾರ್ಯಾಧ್ಯಕ್ಷರು, ಉಪಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಕೋಶಾಧಿಕಾರಿಗಳು, ವಿಭಾಗಿಯ ಅಧ್ಯಕ್ಷರುಗಳು, ಸಾಂಸ್ಕೃತಿಕ ವಿಭಾಗದ ಅಧ್ಯಕ್ಷರು, ಹಾಗೂ ಹಾಜರಿದ್ದ ಎಲ್ಲ ಪದಾಧಿಕಾರಿಗಳು, ಸದಸ್ಯರು, ಜಿಲ್ಲಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ತಾಲೂಕು ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ವಲಯ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಹಾಗೂ ಸಭೆಯಲ್ಲಿ ಹಾಜರಿದ್ದ ಸಮಸ್ತ ಸಮಾಜದ ಬಂಧುಗಳಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳನ್ನು ರಾಜ್ಯಾಧ್ಯಕ್ಷ ಬಸವರಾಜ ದೊಡ್ಮನಿ ತಿಳಿಸಿದ್ದಾರೆ.