• Slide
    Slide
    Slide
    previous arrow
    next arrow
  • ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ

    300x250 AD

    ಕಾರವಾರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ದ್ವಿತೀಯ ಪಿಯುಸಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
    ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ (ಮೆರಿಟ್ ಆಧಾರದ ಮೇಲೆ) ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ಸಮನಾದ ಅಂಶವನ್ನು ಪಡೆದಾಗ ಫಲಾನುಭವಿಯ ನೋಂದಣಿ ಸದಸ್ಯತ್ವದ ಹಿರಿತನವನ್ನು ಆಯ್ಕೆಗೆ ಪರಿಗಣಿಸಲಾಗುವುದು, ಹಾಗಾಗಿ ಕಾರ್ಮಿಕ ಅಧಿಕಾರಿ-ಕಾರವಾರ ಮತ್ತು ಯಲ್ಲಾಪುರ ಉಪವಿಭಾಗ ಉತ್ತರ ಕನ್ನಡ ಜಿಲ್ಲೆ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರು ಮಾರ್ಚ್ 2023ರ ಅಂತ್ಯಕ್ಕೂ ಮೊದಲು ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರ ಮಕ್ಕಳು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ.

    ಫಲಾನುಭವಿಯ ಒಂದು ಮಗುವಿಗೆ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು, ಸದರಿ ಲ್ಯಾಪ್‌ಟಾಪ್ ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿಯವರ ಕಚೇರಿ ಕಾರವಾರ ಮತ್ತು ಯಲ್ಲಾಪುರ ಉಪವಿಭಾಗ ಉತ್ತರ ಕನ್ನಡ ಜಿಲ್ಲೆ ಇವರ ಕಚೇರಿಯಿಂದ ಅಥವಾ ತಾಲೂಕುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕ ನಿರೀಕ್ಷಕರ ಕಚೇರಿಗಳಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆ.27 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಷರತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಕಾರ್ಯವ್ಯಾಪ್ತಿಯಲ್ಲಿ ಬರುವ ಕಾರ್ಮಿಕ ನಿರೀಕ್ಷಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top