• Slide
  Slide
  Slide
  previous arrow
  next arrow
 • ಹಳಿಯಾಳದ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಮಿಂಚಲಿ: ತಹಶೀಲ್ದಾರ್ ರತ್ನಾಕರ್

  300x250 AD

  ಹಳಿಯಾಳ: ಕ್ರೀಡಾ ಕ್ಷೇತ್ರದಲ್ಲಿ ತಾಲೂಕಿನ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಎಲ್ಲಾ ಕ್ರೀಡೆಗಳಲ್ಲಿಯೂ ಪದಕ- ಪ್ರಶಸ್ತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇಂತಹ ಸ್ಪರ್ಧಾಳುಗಳು ರಾಷ್ಟ್ರಮಟ್ಟದಲ್ಲಿ ಗೆದ್ದು ಬರಬೇಕು ಎಂದು ತಹಶೀಲ್ದಾರ್ ಜಿ.ಕೆ.ರತ್ನಾಕರ್ ಆಶಿಸಿದರು.
  ಅವರು ಜಿಲ್ಲಾಡಳಿತ ಉತ್ತರ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪಟ್ಟಣದ ಶಿವಾಜಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
  ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೆ ಮಾತನಾಡಿ, ಜಿಲ್ಲಾಡಳಿತದಿಂದ ಕ್ರೀಡಾಪಟುಗಳ ಪ್ರೋತ್ಸಾಹಕ್ಕೆ ತಾಲೂಕಾ ಮಟ್ಟದಲ್ಲಿ ಸಂಪೂರ್ಣವಾದ ಸಹಕಾರವನ್ನು ನೀಡಲು ನಾವು ಯಾವಾಗಲೂ ಸಿದ್ಧರಿದ್ದೇವೆ ಎಂದು ಹೇಳಿದರು.
  ಈ ಸಂದರ್ಭದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲ್ಲೂಕು ಸಂಯೋಜಕರಾದ ತುಕಾರಾಮ ಗೌಡ, ಪುರಸಭೆ ಮಾಜಿ ಅಧ್ಯಕ್ಷರಾದ ಉಮೇಶ್ ಬೊಳಶಟ್ಟಿ, ಪುರಸಭೆ ಸದಸ್ಯೆ ಸಂಗೀತಾ ಜಾಧವ್ ಸೇರಿ ಹಲವರು ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top