• Slide
    Slide
    Slide
    previous arrow
    next arrow
  • ಜನಪ್ರತಿನಿಧಿಗಳಿಗೆ ಜಲಜೀವನ್ ಮಿಷನ್ ಯೋಜನೆಯ ತರಬೇತಿ

    300x250 AD

    ದಾಂಡೇಲಿ: ನಗರಸಭೆಯ ಆವರಣದಲ್ಲಿರುವ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಸಭಾಭವನದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುರಿತಂತೆ ಜಿ.ಪಂ ಆಶ್ರಯದಡಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

    ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಹಾಲಮನ್ನವರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಜಲಜೀವನ್ ಮಿಷನ್ ಯೋಜನೆಯ ಸಮರ್ಪಕ ಅನುಷ್ಠಾನವಾಗಬೇಕಾದರೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಸಮಗ್ರ ಮಾಹಿತಿಯಿರಬೇಕು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತವಾದ ಪರಿಹಾರವನ್ನು ಒದಗಿಸುವ ಮಹತ್ವಪೂರ್ಣವಾದ ಯೋಜನೆ ಜಲಜೀವನ್ ಮಿಷನ್ ಯೋಜನೆಯಾಗಿದೆ ಎಂದರು.
    ಸoಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಪಂಚಾಯತಿ ಜಲಜೀವನ್ ಮಿಷನ್ ಯೋಜನೆಯ ಸಂಪನ್ಮೂಲ ವ್ಯಕ್ತಿ ವಿಜಯ್ ಅವರು ಭಾಗವಹಿಸಿ ಮಾತನಾಡುತ್ತಾ, ಜಲಜೀವನ್ ಮಿಷನ್ ಯೋಜನೆಯ ಉದ್ದೇಶ, ಅನುಷ್ಟಾನ, ನಿರ್ವಹಣೆ ಮತ್ತು ಗ್ರಾಮ ಪಂಚಾಯ್ತಿಯ ಭಾಗವಹಿಸುವಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ತರಬೇತಿಯಲ್ಲಿ ಅಂಬೇವಾಡಿ, ಆಲೂರು, ಅಂಬಿಕಾನಗರ, ಕೋಗಿಲಬನ/ಬಡಕಾನಶಿರಡಾ ಗ್ರಾ.ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು. ಕೊನೆಯಲ್ಲಿ ತಾಲ್ಲೂಕು ಪಂಚಾಯ್ತು ಸಿಬ್ಬಂದಿ ಕವಿತಾ ಜೋಗಳೇಕರ್ ಅವರು ಸ್ವಾಗತಿಸಿ, ವಂದಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top