• Slide
  Slide
  Slide
  previous arrow
  next arrow
 • ಗ್ರಾಮ ಪಂಚಾಯತಿ ಸದಸ್ಯರ ಜೊತೆ ವಿ.ಪ. ಸದಸ್ಯ ಉಳ್ವೇಕರ್ ಸಭೆ

  300x250 AD

  ಅಂಕೋಲಾ: ತಾಲೂಕಿನ ಡೋಂಗ್ರಿ ಗ್ರಾಮ ಪಂಚಾಯತದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಾದ ಬಳಿಕ ಅಲ್ಲಿನ ಡೋಂಗ್ರಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಜೊತೆಗೆ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಸಭೆ ನಡೆಸಿದರು.

  ಸಭೆ ಉದ್ದೇಶಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಬದಲಾವಣೆ ಆಗಿರಬಹುದು. ಆದರೆ ರಾಜ್ಯದಲ್ಲಿ ಹಾಗೂ ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಮಾತ್ರ ಯಾವ ಕಾರಣಕ್ಕೂ ಕುಗ್ಗುವುದಿಲ್ಲ. ಈ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ತಮ್ಮ ಡೋಂಗ್ರಿ ಪಂಚಾಯತಿ ಅಭಿವೃದ್ಧಿಗೆ ಸದಾ ನಾನು ಬೆಂಬಲವಾಗಿ ಇರುತ್ತೇನೆ. ಬರುವ ಲೋಕಸಭಾ ಚುನಾವಣೆಗೆ ನಮ್ಮ ನಾಯಕರಾದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಮಾಡಿದರೆ ಮಾತ್ರ ದೇಶ ಹಾಗೂ ನಮ್ಮ ಧರ್ಮ ಉಳಿಯಲು ಸಾಧ್ಯ ಎಂದು ಹೇಳಿದರು.
  ಸಭೆಯಲ್ಲಿ ಮಂಡಲದ ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top