ಕಾರವಾರ: ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿಯೂ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್‌ನಲ್ಲಿ ತಜ್ಞ ಸಿಬ್ಬಂದಿ ಕಾರ್ಯನಿರ್ವಹಣೆ ಆರಂಭವಾಗಿದ್ದು, ಸಮಾಜದ ಸ್ವಾಸ್ಥ್ಯ ಕದಡಲು ಕಾರಣರಾಗುವವರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇದೀಗ ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚಿನ ನಿಗಾ ಇಡುವ ಉದ್ದೇಶದಿಂದ ಠಾಣೆಗಳ ಮಟ್ಟಕ್ಕೆ ವಿಸ್ತರಿಸಲಾಗಿದ್ದು, ಪ್ರತಿಯೊಂದು ಪೊಲೀಸ್ ಠಾಣೆಗಳಿಗೂ ತಂತ್ರಜ್ಞಾನದ ಮಾಹಿತಿ ಇರುವ ಸಿಬ್ಬಂದಿಯನ್ನ ನೇಮಕ ಮಾಡಲಾಗಿದೆ. ಪ್ರತೀ ಠಾಣೆಯಿಂದ ಇಬ್ಬರು ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ಅಗತ್ಯ ತರಬೇತಿ ನೀಡಿ ಮಾನಿಟರಿಂಗ್ ಸೆಲ್‌ಗೆ ನೇಮಿಸಲಾಗಿದೆ.
ಇವರು ದಿನದ 24 ಗಂಟೆಯೂ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಟ್ಟು, ಸರ್ಕಾರ, ಜನಪ್ರತಿನಿಧಿಗಳು ವಿರುದ್ಧ, ಶಾಂತತಾ ಭಂಗ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂಥ ಪೋಸ್ಟ್‌ಗಳನ್ನು ಹರಿಬಿಡುವವರನ್ನು ಗುರುತಿಸಿ, ಅವರ ವಿರುದ್ಧ ದೂರು ದಾಖಲಿಸಿಕೊಳ್ಳುತ್ತಿದ್ದಾರೆ.