• Slide
    Slide
    Slide
    previous arrow
    next arrow
  • ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ದೇಶಪಾಂಡೆ

    300x250 AD

    ಜೊಯಿಡಾ: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ, ಮನುಷ್ಯ ಸದೃಢವಾಗುತ್ತಾನೆ. ಎಲ್ಲರೂ ಪ್ರೀತಿ ವಿಶ್ವಾಸದಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

    ಅವರು ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ ಉತ್ತರಕನ್ನಡ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ ಕಾರವಾರ ಮತ್ತು ಜೋಯಿಡಾ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ನಡೆದ ದಸರಾ ಕ್ರೀಡಾಕೂಡವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದಿನ ಮಕ್ಕಳು ಕ್ರೀಡೆಯಲ್ಲಿ ಹಾಗೂ ಶಿಕ್ಷಣದಲ್ಲಿ ಸಾಧನೆ ಮಾಡಬೇಕು, ನಾನು ಕ್ರೀಡೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತೇನೆ, ಜೋಯಿಡಾ ತಾಲೂಕು ಕಾಡಿನಿಂದ ಕೂಡಿದ ಪ್ರದೇಶ ಇಲ್ಲಿ ಜನಸಂಖ್ಯೆ ಕಡಿಮೆ ಆದರೆ ಈಗ ಪ್ರವಾಸೋದ್ಯಮದಿಂದ ತಾಲೂಕು ಪ್ರಸಿದ್ಧಿ ಪಡೆದಿದೆ ಎಂದು ಗುಂಡು ಎಸೆತ ಮಾಡಿ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಯವಕರಿಗೆ ಮಾದರಿಯಾದರು

    300x250 AD

    ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಚಂದ್ರಮ್ಮ, ಕೆ.ಪಿ.ಸಿ.ಸಿ. ಸದಸ್ಯ ಸದಾನಂದ ದಬ್ಗಾರ, ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ವಿನಯ ದೇಸಾಯಿ, ಕಾಂಗ್ರೆಸ್ ಪಕ್ಷದ ರವಿ ರೆಡ್ಕರ್, ರಮೇಶ ನಾಯ್ಕ, ಅರುಣ ಭಗವತಿರಾಜ್, ಪ್ರಸನ್ನ ಗಾವಡಾ, ಪಿಎಸ್‌ಐ ಮಹೇಶ ಮಾಳಿ ಇತರರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top