• Slide
    Slide
    Slide
    previous arrow
    next arrow
  • ಕ್ರೀಡಾಕೂಟ: ಲಯನ್ಸ್ ಶಾಲೆಯ ತನುಶ್ರೀಗೆ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ

    300x250 AD

    ಶಿರಸಿ: ಜಿಲ್ಲಾ ಪಂಚಾಯತ್ ಉತ್ತರಕನ್ನಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ, ಶಿರಸಿ (ಉ.ಕ) ಲಯನ್ಸ್ ಕ್ಲಬ್ ಶಿರಸಿ, ಸಿರ್ಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿ (ರಿ.), ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ  ಸೆಪ್ಟೆಂಬರ್ 8 ಮತ್ತು 9 ರಂದು ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಶಿರಸಿ ತಾಲೂಕಾ ಮಟ್ಟದ ಕ್ರೀಡಾಕೂಟ-2023ರಲ್ಲಿ ಇಲ್ಲಿನ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ  ಕುಮಾರಿ ತನುಶ್ರೀ T. ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಗೆ ಭಾಜನಳಾಗಿದ್ದಾಳೆ.

    ಲಯನ್ಸ್ ಎಜುಕೇಶನ್ ಸೊಸೈಟಿಯ ಕೋಶಾಧ್ಯಕ್ಷ MJF. ಲ.ಉದಯ ಸ್ವಾದಿಯವರು ಇರಿಸಿದ್ದ ನಗದು ಬಹುಮಾನವನ್ನು ಗಳಿಸಿರುತ್ತಾಳೆ. ಈಕೆ ಉದ್ದ ಜಿಗಿತ ಮತ್ತು ಎತ್ತರ ಜಿಗಿತ ಎರಡೂ ಕ್ರೀಡೆಯಲ್ಲೂ ಪ್ರಥಮ ಸ್ಥಾನವನ್ನು ಗಳಿಸಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಶುಭ ಹಾರೈಕೆಗಳನ್ನು ಮತ್ತು  ಬೆಂಬಲವಾಗಿ  ನಿಂತ ಪೋಷಕರಿಗೆ,    ಲಯನ್ಸ್ ಶಿಕ್ಷಣ ಸಂಸ್ಥೆ, ಪ್ರಾಂಶುಪಾಲರು ಮತ್ತು ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top