Slide
Slide
Slide
previous arrow
next arrow

ಸ್ಕೋಡವೇಸ್ ಯೋಜನೆಗಳು ಅಸಹಾಯಕರ ಪಾಲಿಗೆ ವರದಾನವಾಗಿವೆ: ಶಾಸಕ ಭೀಮಣ್ಣ

300x250 AD

ಶಿರಸಿ: ಮಹಿಳೆಯರ ಆರ್ಥಿಕವಾಗಿ ಸಧೃಢವಾದಾಗ ಮಾತ್ರ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂದು ಶಿರಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ನಗರದ ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ ನಿಯಮಿತದ 8ನೇ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ಆಧುನಿಕತೆ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳ ಭರಾಟೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು,ಕೃಷಿ ಕೂಲಿ ಹಾಗೂ ಅಸಂಘಟಿತ ಕಾರ್ಮಿಕರು ಬದುಕು ಕಟ್ಟಿಕೊಳ್ಳಲು ತಾವು ಹೊಂದಿದ ಕೌಶಲ್ಯಗಳ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು. ಮುಂದುವರೆದು ಮಾತನಾಡಿದ ಶಾಸಕರು ಮಹಿಳೆಯರು,ಅಸಂಘಟಿತರು ಹಾಗೂ ನಿರುದ್ಯೋಗ ಯುವಕ ಯುವತಿಯರು ಕೌಶಲ್ಯ ವರ್ಧನೆಗಾಗಿ ಸ್ಕೊಡ್‌ವೆಸ್ ಸಂಸ್ಥೆ ಕೈಗೊಂಡಿರುವ ಹಲವಾರು ಯೋಜನೆಗಳು ಅಸಹಾಯಕರ ಪಾಲಿಗೆ ವರದಾನವಾಗಿದ್ದು ಇಂತಹ ಸಮಾಜಮುಖಿ ಯೋಜನೆಗಳ ಅನುಷ್ಠಾನಕ್ಕೆ ಬೇಕಾದ ಸಹಾಯ ಒದಗಿಸುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಅಧ್ಯಕ್ಷೆ ಸರಸ್ವತಿ ಎನ್. ರವಿ ಮಾತನಾಡಿ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಸ್ಥೆಯು ಮಹಿಳೆಯರೇ, ಮಹಿಳೆಯರಿಗಾಗಿ, ಮಹಿಳೆಯರಿಗೋಸ್ಕರ ಸ್ಥಾಪಿಸಲಾದ ಸಂಸ್ಥೆಯಾಗಿದ್ದು, ಸದಸ್ಯರ ಸರ್ವತೋಮುಖ ಅಭಿವೃದ್ದಿಯೇ ಸಂಸ್ಥೆಯ ಉದ್ದೇಶವಾಗಿದೆ. ಕಳೆದ 8 ವರ್ಷಗಳಲ್ಲಿ ಸಾವಿರಾರು ಮಹಿಳೆಯರು ಹಲವಾರು ಆದಾಯೋತ್ಪನ್ನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಿದ್ದಾರೆ ಎಂದರು. ಸಂಸ್ಥೆ ಆರಂಭದಿಂದಲೂ ಸಂಪೂರ್ಣ ಗಣಕೀಕೃತ ವ್ಯವಸ್ಥೆಯನ್ನು ಹೊಂದಿದ್ದು ಸದಸ್ಯ ಗ್ರಾಹಕರೊಂದಿಗೆ ವಿಶ್ವಾಸಾರ್ಹ ಹಾಗೂ ಪಾರದರ್ಶಕ ವ್ಯವಹಾರಗಳನ್ನು ನೆಡೆಸಿದ್ದು ಒಂಬತ್ತು ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಸ್ಕೊಡ್‌ವೆಸ್ ಸಂಸ್ಥೆಯ ಉಪಾದ್ಯಕ್ಷ ಕೆ.ವಿ.ಕೂರ್ಸೆ, ಮಹಿಳೆಯರು ಆದಾಯ ಹೆಚ್ಚಿಸಿಕೊಳ್ಳುವ ಆರ್ಥಿಕ ಚಟುವಟಿಕೆಗಳನ್ನೆ ಹಮ್ಮಿಕೊಳ್ಳುವ ಮೂಲಕ ಹೆಚ್ಚಿನ ಉಳಿತಾಯ ಮಾಡುವ ಕಡೆಗೆ ಗಮನಹರಿಸುವಂತೆ ಮಹಿಳೆಯರಿಗೆ ಕಿವಿಮಾತು ಹೇಳಿದರು.

300x250 AD

ವೇದಿಕೆಯಲ್ಲಿ ಶಿರಸಿ ರೋಟರಿ ಇನ್ನರ್‌ವ್ಹಿಲ್ ಅದ್ಯಕ್ಷೆ ಪುಷ್ಪಲತಾ ಭಟ್, ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೆಶಕ ಡಾ. ವೆಂಕಟೇಶ ನಾಯ್ಕ ಸಂಧರ್ಭೋಚಿತವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು, ಎಸ್‌ಎಸ್‌ಎಲ್‌ಸಿ ,ಪಿಯುಸಿ ಯಲ್ಲಿ ಶೇ.95ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು,ಉತ್ತಮ ಸಾಧನೆ ಮಾಡಿದ ಸಿಬ್ಬಂದಿಗಳನ್ನು ಸನ್ಮಾನಿಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಸಿಇಒ ಗಣಪತಿ ನಾಯ್ಕ, ಉಪಾದ್ಯಕ್ಷೆ ಹೇಮಲತಾ ಚೌಗುಲೆ ಹಾಗೂ ಎಲ್ಲಾ ನಿದೇಶಕರು ಉಪಸ್ಥಿತರಿದ್ದರು. ಆರಂಭದಲ್ಲಿ ಹೇಮಲತಾ ಚೌಗುಲ ಎಲ್ಲರನ್ನು ಸ್ವಾಗತಿಸಿದರು.ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದ್ದ ಈ ಸಮ್ಮೇಳನದಲ್ಲಿ ಕಾರ್ಯಕ್ರಮ ಅಧಿಕಾರಿ ರಿಯಾಜ್ ಸಾಗರ್ ಕಾರ್ಯಕ್ರಮವನ್ನು ನಿರ್ವಹಿಸಿ ಕೊನೆಯಲ್ಲಿ ವಂದಿಸಿದರು.

Share This
300x250 AD
300x250 AD
300x250 AD
Back to top