ಶಿರಸಿ: ಇಲ್ಲಿನ ಪಂಡಿತ್ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಕಾರವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆಯಲ್ಲಿನ ಓರ್ವ ಮಹಿಳಾ ಸಿಬ್ಬಂದಿಯ ಮೇಲೆ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ಪತ್ರೆಯ ಎಲ್ಲಾ ವಿಭಾಗಗಳನ್ನು ಪರಿಶೀಲಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳಿಗೆ ಆಸ್ಪತ್ರೆಯ ವೈದ್ಯಾದಿಕಾರಿ ಡಾ.ಗಜಾನನ ಭಟ್ಟ ಸಮರ್ಪಕ ಮಾಹಿತಿಗಳನ್ನು ನೀಡುತ್ತಿರುವುದಾಗಿ ತಿಳಿದುಬಂದಿದೆ.