• Slide
    Slide
    Slide
    previous arrow
    next arrow
  • ಅರಣ್ಯ ಇಲಾಖೆ ಸಿಬ್ಬಂದಿ ಹಸಿರು ಯೋಧರಂತೆ: ನ್ಯಾ. ವಿಜಯಕುಮಾರ್

    300x250 AD

    ಕಾರವಾರ: ದೇಶದ ಸೈನಿಕರು ಗಡಿಯಲ್ಲಿ ದೇಶದ ಸಾರ್ವಭೌಮತ್ವಕ್ಕೆ ಹೋರಾಡಿದರೆ, ಅರಣ್ಯ ಭೂಮಿಯ ರಕ್ಷಣೆ ಮಾಡುವ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ‘ಹಸಿರು ಯೋಧರು’ ಎಂದು ಕರೆಯಲು ಸಂತೋಷವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ ಹೇಳಿದರು.

    ಅವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿನ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಮಾತನಾಡಿದರು. ಮನುಕುಲದ ಅಭಿವೃದ್ಧಿಗೆ ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಯೂ ಅತಿಮುಖ್ಯ. ಭೂಮಿಯ ನೈಸರ್ಗಿಕ ಸಂಪತ್ತನ್ನು ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಅರಣ್ಯದ ವಿಸ್ತೀರ್ಣ ಕ್ಷೀಣಿಸುತ್ತಿದ್ದು, ಅರಣ್ಯವನ್ನು ವೃದ್ಧಿಸುವ ಜವಾಬ್ದಾರಿ ಹಸಿರು ಯೋಧರ ಮೇಲಿದೆ. ದುರ್ಗಮ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳು ಮತ್ತು ಬೇಟೆಗಾರರ ದಾಳಿಯ ಭಯದ ನಡುವೆ ಕರ್ತವ್ಯ ನಿರ್ವಹಿಸುವ ಅವರ ಧ್ಯೆರ್ಯ, ಸಾಹಸಗಳು ಸದಾ ಶ್ಲಾಘನೀಯ ಎಂದರು.

    ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತಕುಮಾರ ಕೆ.ಸಿ. ಮಾತನಾಡಿ, ಪ್ರತಿ ವರ್ಷ ಸೆ.11ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತದ ಅರಣ್ಯಗಳು, ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ಅರಣ್ಯ ಇಲಾಖೆಯ ಸಿಬ್ಬಂದಿಗಳ ತ್ಯಾಗವನ್ನು ಸ್ಮರಿಸುವ ಸಲುವಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಕಳೆದ 5 ದಶಕಗಳಲ್ಲಿ ರಾಜ್ಯದಲ್ಲಿ 57 ಮಂದಿ ಕರ್ತವ್ಯ ನಿರತರಾದ ಹಸಿರು ಯೋಧರು ಹಲವಾರು ಕ್ಲಿಷ್ಟಕರ ಸನ್ನಿವೇಶದಲ್ಲಿ ಹುತಾತ್ಮರಾಗಿರುತ್ತಾರೆ. ಈ ಎಲ್ಲಾ ಹುತಾತ್ಮರ ತ್ಯಾಗ, ಬಲಿದಾನ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದರು.

    300x250 AD

    ಕಾರ್ಯಕ್ರಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ನಾವಿ, ಕಾರವಾರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಸಿ.ಜಯೇಶ, ಅಂಕೋಲಾ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣ ಗೌಡ, ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ನಾಯ್ಕ, ಪರೇಡ್ ಮುಖ್ಯಸ್ಥ ಅಜಿತ್ ದೇವರೆಡ್ಡಿ, ಪತ್ರಾಂಕಿತ ವ್ಯವಸ್ಥಾಪಕ ವಿ.ಆರ್.ಗಾಂವ್ಕರ್ ಇತರರು ಇದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top