Slide
Slide
Slide
previous arrow
next arrow

ಪಾಲಕರು ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿ: ದಿನಕರ ಶೆಟ್ಟಿ

300x250 AD

ಗೋಕರ್ಣ: ಇಲ್ಲಿಯ ಸಮೀಪದ ಗಂಗೆಕೊಳ್ಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪ್ರಸ್ತುತ ಸಾಲಿನ ಗೋಕರ್ಣ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ವಿಜೇತರಿಗೆ ಬಹುಮಾನ ವಿತರಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತಿಗೊಳಿಸದೇ ಅವರನ್ನು ಕ್ರೀಡೆ, ಸಂಸ್ಕೃತಿ ಸೇರಿದಂತೆ ವಿವಿಧ ಹವ್ಯಾಸಗಳಿಗೆ ಪ್ರೋತ್ಸಾಹ ನೀಡಬೇಕು. ಶಿಕ್ಷಕರ ಮತ್ತು ಪಾಲಕರು ಇದನ್ನು ಗಮನದಲ್ಲಿಟ್ಟುಕೊಂಡು ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವಂತೆ ನೋಡಿಕೊಳ್ಳಬೇಕು ಎಂದರು.

300x250 AD

ನಾಡುಮಾಸ್ಕೇರಿ ಗ್ರಾ.ಪಂ. ಉಪಾಧ್ಯಕ್ಷೆ ವಿಜಯಾ ನಾಯಕ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯ ಎನ್.ಆರ್. ನಾಯಕ, ಗ್ರಾ.ಪಂ. ಸದಸ್ಯರಾದ ರಾಜೇಶ ನಾಯಕ, ಚಂದ್ರಶೇಖರ ನಾಯ್ಕ, ದಯಾ ಮೇತಾ, ನಾಗಾ ತಾಂಡೇಲ, ರೋಹಿಣಿ ನಾಯ್ಕ, ನಾಡುಮಾಸ್ಕೇರಿ ಪ್ರೌಢಶಾಲೆಯ ಪ್ರಾಚಾರ್ಯೆ ಪದ್ಮಾ ನಾಯಕ ಇತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top