Slide
Slide
Slide
previous arrow
next arrow

ಚಿತ್ರಗಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

300x250 AD

ಕುಮಟಾ: ಪಟ್ಟಣದ ಚಿತ್ರಗಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಂಪನ್ನಗೊoಡಿತು.

ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ಚಟುವಟಿಗಳಲ್ಲಿ ಭಾಗವಹಿಸಿದರೆ ಕ್ರಿಯಾಶೀಲತೆ ವೃದ್ಧಿಯಾಗುತ್ತದೆ. ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತ ಭಾಗವಹಿಸುವುದು ಬಹು ಮುಖ್ಯ. ಇಂಥ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಯಾಗುತ್ತದೆ ಎಂದರು.

300x250 AD

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಲ್. ಭಟ್, ಪುರಸಭಾ ಸದಸ್ಯರಾದ ಸಂತೋಷ ನಾಯ್ಕ್, ಸುಮತಿ ಭಟ್ ಹಾಗೂ ಅಭಿ ಚಂದ್ರಹಾಸ ನಾಯ್ಕ್, ಜಿ. ಪಂ. ಅಭಿಯಂತರ ಸಂಜೀವ ನಾಯಕ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್. ಬಿ. ನಾಯ್ಕ್, SDMC ಅಧ್ಯಕ್ಷ ರಾಘವೇಂದ್ರ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ್ ಪಟಗಾರ, ಸಿ. ಆರ್. ಪಿ. ಮಹೇಶ ನಾಯ್ಕ್, ಮುಖ್ಯ ಶಿಕ್ಷಕ ಪಾಂಡುರ0ಗ ಹುಲಸ್ವಾರ ಇತರರು ಇದ್ದರು.

Share This
300x250 AD
300x250 AD
300x250 AD
Back to top