Slide
Slide
Slide
previous arrow
next arrow

ಬಿಜಿಎಸ್‌ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ

300x250 AD

ಕುಮಟಾ: ತಾಲೂಕಿನ ಮಿರ್ಜಾನ್ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ನಡೆಯಿತು. ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ವಿಷ್ಣು ಪಟಗಾರ ಅವರು, ಹಿಂದಿ ನಮ್ಮ ದೇಶದ ಜನಸಂಖ್ಯೆಯ ಬಹುಪಾಲು ಜನರು ಮಾತನಾಡುವ ಭಾಷೆ. ಹಿಂದಿಯನ್ನು ನಮ್ಮ ರಾಷ್ಟ್ರೀಯ ಭಾಷೆ ಎಂದು ಸರ್ಕಾರ ಘೋಷಣೆ ಮಾಡಬೇಕು. ಹಿಂದಿಯನ್ನು ಹೆಚ್ಚು ಪ್ರಚುರ ಪಡಿಸಲು ಕೇಂದ್ರ ಸರ್ಕಾರ ಅದಕ್ಕೆ ರಾಜ ಭಾಷೆಯ ಸ್ಥಾನ ನೀಡಿ ಹಿಂದಿ ದಿವಸ, ಹಿಂದಿ ಸಪ್ತಾಹ ಮುಂತಾದ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳುತ್ತಿದೆ. ಇದಲ್ಲದೆ ಹಿಂದಿ ಪ್ರಚಾರ ಪರಿಷತ್ ಮುಂತಾದ ಆಯೋಗಗಳನ್ನು ರಚಿಸಿ ಹಿಂದಿಯೇತರ ಪ್ರದೇಶಗಳಲ್ಲಿ ಹಿಂದಿ ಭಾಷೆಯ ಪ್ರಚಾರಕ್ಕೆ ಇವುಗಳನ್ನು ಬಳಸುತ್ತಿದೆ. ಹಿಂದಿಯನ್ನು ಕಲಿತರೆ ಉತ್ತರ ಮತ್ತು ದಕ್ಷಿಣ ಬಾರತದಲ್ಲಿ ವ್ಯವಹರಿಸಲು ತುಂಬಾ ಸುಲಭ ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷರಾದ ದಾಮೋದರ ಭಟ್, ಬಿಜಿಎಸ್ ಸೆಂಟ್ರಲ್ ಸ್ಕೂಲಿನ ಆಡಳಿತಾಧಿಕಾರಿ ಜಿ.ಮಂಜುನಾಥ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜಿಎಸ್ ಸೆಂಟ್ರಲ್ ಸ್ಕೂಲಿನ ಪ್ರಾಂಶುಪಾಲೆ ಲೀನಾ ಎಂ. ಗೋನೆ ಹಳ್ಳಿಯವರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾದ ಸೌಭಾಗ್ಯ ಬಾಳೇರಿ, ಹಿಂದಿ ಶಿಕ್ಷಕರಾದ ಕಾಂಚನಾ ನಾಯ್ಕ, ಸೀಮಾ ಡಿಸೋಜಾ ಮತ್ತು ವೈಲೆಟ್ ಕ್ರಸ್ಟಾರವರನ್ನು ಸನ್ಮಾನಿಸಲಾಯಿತು. ಹಿಂದಿ ದಿವಸದ ನಿಮಿತ್ತ ಹಲವಾರು ಸ್ಪರ್ಧೆಗಳನ್ನು ಮಕ್ಕಳಿಗೆ ಏರ್ಪಡಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

300x250 AD
Share This
300x250 AD
300x250 AD
300x250 AD
Back to top