Slide
Slide
Slide
previous arrow
next arrow

ಸಂವಿಧಾನ ಪೀಠಿಕೆ ಓದಲು 5.50 ಲಕ್ಷ ಮಂದಿ ನೋಂದಣಿ

300x250 AD

ಕಾರವಾರ: ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ತಿಳಿಸಲು ಆನ್‌ಲೈನ್ ಮೂಲಕ ನೊಂದಣಿಗಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು 5.50 ಲಕ್ಷಕ್ಕೂ ಅಧಿಕ ಸಾರ್ವಜನಿಕರು, ಸಂಘ- ಸಂಸ್ಥೆಗಳು ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ನೊಂದಾಯಿಸಿಕೊ0ಡಿದ್ದಾರೆ.

ಇoದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸುವ ಕಾರ್ಯಕ್ರಮದ ನೇರಪ್ರಸಾರವನ್ನು ಕಾಜುಬಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಎಲ್‌ಇಡಿ ಮೂಲಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ 8.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಕಲ್ಯಾಣ ಮಂಟಪದವರೆಗೆ ವಿವಿಧ ಕಲಾತಂಡಗಳು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಹಸ್ತಾಂತರ, ವಾಚನ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅಜ್ಜಪ್ಪ ಸೊಗಲದ್ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top