ಕುಮಟಾ: ತಾಲೂಕಿನ ಮಿರ್ಜಾನ್ ಖೈರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಸೋರುತ್ತಿರುವ ಶಾಲಾ ಕಟ್ಟಡದ ಮೇಲ್ಛಾವಣಿ ದುರಸ್ತಿ ಮಾಡಿಕೊಡುವ ಭರವಸೆ ನೀಡಿದರು.
ತಾಲೂಕಿನ ಮಿರ್ಜಾನ್ ಖೈರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ಮುಖಂಡರು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಅವರನ್ನು ಶಾಲೆಗೆ ಕೆರೆಯಿಸಿದ್ದರು. ಶಾಲೆಗೆ ಭೇಟಿ ನೀಡಿದ ಅವರು ಕಟ್ಟಡದ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಸೋರುತ್ತಿರುವ ಶಾಲಾ ಕಟ್ಟಡವನ್ನು ದುರಸ್ತಿ ಮಾಡಿಕೊಡುವ ಭರವಸೆಯನ್ನು ಎಸ್‌ಡಿಎಂಸಿ ಸದಸ್ಯರಿಗೆ ಮತ್ತು ಶಿಕ್ಷಕರಿಗೆ ನೀಡಿದರು.
ಈ ಸಂದರ್ಭದಲ್ಲಿ ನಿವೃತ್ತ ಶಾಲಾ ಮುಖ್ಯಾಧ್ಯಾಪಕ ಬಾಲಚಂದ್ರ ಗಾಂವಕರ ಗ್ರಾ.ಪಂ. ಮಾಜಿ ಸದಸ್ಯ ಮಂಜು ಮುಕ್ರಿ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿದರು. ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಕಾಂಗ್ರೇಸ್ ಮುಖಂಡ ದತ್ತು ಕೋಡ್ಕಣಿ ಶಾಲಾ ಮುಖ್ಯಾಧ್ಯಾಪಕಿ ಮೀನಾಕ್ಷಿ ಗಾಂವಕರ ಶಿಕ್ಷಕಿ ಸುಧಾಬಾಯಿ ಹೆಗಡೆ ಇತರರು ಉಪಸ್ಥಿತರಿದ್ದರು. ಬಾಲಚಂದ್ರ ಗಾಂವಕರ ಸ್ವಾಗತಿಸಿ ನಿರೂಪಿಸಿದರು.