Slide
Slide
Slide
previous arrow
next arrow

ಕರ್ನಾಟಕದ ಸಂಭ್ರಮಕ್ಕೆ ಲೋಗೋ ರಚಿಸಲು ಆಹ್ವಾನ

300x250 AD

ಕಾರವಾರ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ‘ಕರ್ನಾಟಕ ಸಂಭ್ರಮ 50- ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ.

ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ(ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ 25,000ಗಳ ಬಹುಮಾನವನ್ನು ನಿಗದಿಪಡಿಸಲಾಗಿದೆ.

300x250 AD

ಲಾಂಛನ(ಲೋಗೋ)ದ ಮಾದರಿಯನ್ನು ಕಳುಹಿಸಲು ಸೆ.20ರಿಂದ ಸೆ.30ರವರೆಗೆ ಅವಕಾಶವಿದ್ದು, ಆಸಕ್ತರು ಈ ಕುರಿತು ಅಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ https://www.kannadasiri.karnataka.gov.in ದಲ್ಲಿ ಪಡೆಯಬಹುದಾಗಿದೆ.

Share This
300x250 AD
300x250 AD
300x250 AD
Back to top