Slide
Slide
Slide
previous arrow
next arrow

ಸೆ.22ಕ್ಕೆ ಉತ್ತರ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

300x250 AD

ಶಿರಸಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉತ್ತರ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ‘ಉತ್ತರ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ’ವನ್ನು‌ ಸೆ.22 ಶುಕ್ರವಾರ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಉದ್ಘಾಟಿಸಲಿರುವ ಕಾರ್ಯಕ್ರಮದಲ್ಲಿ, ವಿಧಾನ‌ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಭೀಮಣ್ಣ ನಾಯ್ಕ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ‌ಸಂಸದ ಅನಂತಕುಮಾರ್ ಹೆಗಡೆ, ಶಾಸಕರುಗಳಾದ ಆರ್.ವಿ.ದೇಶಪಾಂಡೆ, ಎಸ್.ವಿ.ಸಂಕನೂರು, ಶಿವರಾಮ ಹೆಬ್ಬಾರ್, ದಿನಕರ ಶೆಟ್ಟಿ, ಸತೀಶ್ ಸೈಲ್, ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ್ ಹಾಗೂ ವಿಶೇಷ ಆಹ್ವಾನಿತರಾಗಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ ಕುಮಾರ ಸಿಂಗ್ ಆಗಮಿಸಲಿದ್ದಾರೆ.

300x250 AD

ಕಾರ್ಯಕ್ರಮಕ್ಕೆ ಸರ್ವ ಕ್ರೀಡಾಭಿಮಾನಿಗಳು ಆಗಮಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This
300x250 AD
300x250 AD
300x250 AD
Back to top