ಹೊನ್ನಾವರ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಇಂಡಿಯನ್ ಸ್ವಚ್ಚತಾ ಲೀಗ್ ಸಿಸನ್ 2.0ರ ಅಡಿಯಲ್ಲಿ ಪಟ್ಟಣ ಪಂಚಾಯತಿಯಿ0ದ ಸಂಘ- ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಯೋಗದೊಂದಿಗೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪುರಾಣ ಪ್ರಸಿದ್ಧ ರಾಮತೀರ್ಥದಲ್ಲಿ ‘ಸ್ವಚ್ಛತಾ ಹಿ ಸೇವಾ’ ಎಂಬ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ರಾಮತೀರ್ಥ ಕ್ಷೇತ್ರದ ಮೆಟ್ಟಿಲುಗಳಲ್ಲಿ ಮಳೆಗಾಲವಾಗಿರುವುದರಿಂದ ಪಾಚಿ ಬೆಳೆದು, ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ನಡೆದಾಡಲು ತುಂಬಾ ತೊಂದರೆಯಾಗುತ್ತಿತ್ತು. ಪಟ್ಟಣ ಪಂಚಾಯತ ಪೌರಕಾರ್ಮಿಕರು, ಸಿಬ್ಬಂದಿ ವರ್ಗದವರು ಮೆಟ್ಟಿಲುಗಳನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.
ಈ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರವೀಣಕುಮಾರ ನಾಯಕ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಮತ್ತು ಮೇಲಾಧಿಕಾರಿಗಳ ಸೂಚನೆಯಂತೆ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಐತಿಹಾಸಿಕ ಸ್ಥಳ ಅಥವಾ ಕಡಲತೀರದಲ್ಲಿ ಆಯೋಜಿಸಲಾಗಿದೆ. ಈ ನಿಮಿತ್ತ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧವಾದ ಶ್ರೀಕ್ಷೇತ್ರ ರಾಮತೀರ್ಥವನ್ನು ಆಯ್ಕೆಮಾಡಿಕೊಂಡಿದ್ದು, ಅದರಂತೆ ಇಂದು ಸ್ವಚ್ಛತಾ ಕಾರ್ಯವನ್ನು ಕೈಗೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸಿಬ್ಬಂದಿ ವರ್ಗ, ಪೌರಕಾರ್ಮಿಕರು, ರೋಟೆರಿಯನ್ ಮಹೇಶ ಕಲ್ಯಾಣಪುರ ಹಾಗೂ ಸ್ವಚ್ಛ ಹೊನ್ನಾವರ ಬಳಗದ ಸದಸ್ಯರು ಹಾಜರಿದ್ದರು.