Slide
Slide
Slide
previous arrow
next arrow

ಸೆ.23ಕ್ಕೆ ಸೈಲೇಜ್ ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮ

300x250 AD

ಶಿರಸಿ: ತೋಟಗಾರ್ಸ್ ಗ್ರೀನ್ ಗ್ರೂಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿಯ ಸೈಲೇಜ್(ರಸಮೇವು) ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಸೆ.23, ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಟಿ.ಆರ್.ಸಿ.ಸಭಾಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರ್ಸ್ ಗ್ರೀನ್ ಗ್ರೂಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿಯ ಅಧ್ಯಕ್ಷ ಶ್ರೀಧರ ರಾಮಕೃಷ್ಣ ಹೆಗಡೆ ಕಡವೆ ವಹಿಸಲಿದ್ದಾರೆ. ಬ್ರ್ಯಾಂಡ್ ಲೋಗೋ ಉದ್ಘಾಟನೆಯನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ನೆರವೇರಿಸಲಿದ್ದು, ಟಿ.ಆರ್.ಸಿ.ಅಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ, ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಡಾ.ಬಿ.ಪಿ.ಸತೀಶ, ಕೃಷಿ ಇಲಾಖೆ ಉಪನಿರ್ದೇಶಕ ನಟರಾಜ್ ಎಚ್., ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸತೀಶ್ ಹೆಗಡೆ,ಸಹಾಯಕ ಕೃಷಿ ನಿರ್ದೇಶಕ ಮಧುಕರ ನಾಯ್ಕ್, ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್, ಪಶು ತಜ್ಞ ಡಾ.ಪಿ.ಎಸ್.ಹೆಗಡೆ, ಟಿ.ಆರ್.ಸಿ. ಉಪಾಧ್ಯಕ್ಷ ವಿಶ್ವಾಸ ಬಲಸೆ, ಸ್ಕೊಡವೇಸ್ ಕಾರ್ಯಕಾರಿ ನಿರ್ದೇಶಕ ಡಾ.ವೆಂಕಟೇಶ ನಾಯ್ಕ್ ಗೌರವ ಉಪಸ್ಥಿತಿಯನ್ನು ನೀಡಲಿದ್ದಾರೆ.

300x250 AD

ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share This
300x250 AD
300x250 AD
300x250 AD
Back to top