ಯಲ್ಲಾಪುರ: ಮೈಸೂರಿನಲ್ಲಿ ಗ್ಯಾಂಗ್ ರೇಪ್ ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ ಶ್ರೀಕೃಷ್ಣ ಕಾಮ್ಕರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರಕರಣದ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಂಧಿತ ಆರೋಪಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕಾರ, ಪ್ರಧಾನ ಕಾರ್ಯದರ್ಶಿ ಅನಿಲ್ ಮರಾಠೆ, ಮಹಿಳಾ ಘಟಕದ ಅಧ್ಯಕ್ಷೆ ಪೂಜಾ ನೇತ್ರೇಕರ್, ಪ್ರಮುಖರಾದ ಸರಸ್ವತಿ ಗುನಗಾ, ಪ್ರೀತಿ ಚೌಹಾಣ,ಮುಷರತ್, ಗಜಾನನ ಭಟ್ ಜಡ್ಡಿ, ವಿ.ಎಸ್.ಭಟ್ಟ ಇತರರಿದ್ದರು.