Slide
Slide
Slide
previous arrow
next arrow

ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ: ರಾಜ್ಯ ಸಚಿವ ಸಂಪುಟ ನಿರ್ಧಾರ

300x250 AD

ಬೆಂಗಳೂರು: ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸುಪ್ರೀಂಕೋರ್ಟ್ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶಿಸಿತ್ತು.

ರಾಜ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಬಿಡುಗಡೆ ಮಾಡುತ್ತಿರುವ ಮಾದರಿಯಲ್ಲೇ ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಕಾವೇರಿ ನದಿ ನೀರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಆದೇಶದ ಬಗ್ಗೆ ಸಂಪುಟ ಸಭೆಯಲ್ಲಿ ವಿವರಿಸಲಾಗಿದೆ. ಸುಪ್ರೀಂ ಆದೇಶವನ್ನು ಪಾಲಿಸಲಾಗುವುದು. ಸೆ.26ರವರೆಗೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುವುದು. 8000 ಕ್ಯುಸೆಕ್ಸ್ ಒಳಹರಿವು ಇದೆ. ಈಗಾಗಲೇ 3,000-3,500 ಕ್ಯುಸೆಕ್ಸ್ ನೀರು ಹರಿದು ಹೋಗುತ್ತಿದೆ. ಸೆ.26 ತನಕ ನೀರು ಬಿಡಲಾಗುತ್ತದೆ. ನಾವು ರೈತರ ಹಿತರಕ್ಷಣೆಯನ್ನೂ ಮಾಡುತ್ತೇವೆ. ಕುಡಿಯುವ ನೀರಿನ ರಕ್ಷಣೆಯನ್ನು ಮಾಡುತ್ತೇವೆ ಎಂದು ಹೇಳಿದರು.

300x250 AD


ಹೀಗಾಗಿ ಮೇಕೆದಾಟು ಯೋಜನೆ ಮುಂದುವರಿಸಲು ತೀರ್ಮಾನಿಸಿದ್ದೇವೆ. ಈ ಸಂಬಂಧ ಕೇಂದ್ರ ಪರಿಸರ ಇಲಾಖೆಯ ಅನುಮೋದನೆ ಪಡೆಯುವುದು ಸೇರಿ ಬೇಕಾದ ಇತರೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

Share This
300x250 AD
300x250 AD
300x250 AD
Back to top