Slide
Slide
Slide
previous arrow
next arrow

ಹಿಂಸಾತ್ಮಕವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ಅಪಘಾತ ; ಈರ್ವರು ಗಂಭೀರ

300x250 AD

ಶಿರಸಿ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಚಾಲಕನ ನಿರ್ಲಕ್ಷ್ಯದಿಂದ ಬುಗುಡಿಕೊಪ್ಪ ಸೇತುವೆಯ ರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದಿದ್ದು, ಒಂದು ಜಾನುವಾರು ಸ್ಥಳದಲ್ಲೇ ಮೃತಪಟ್ಟು, ವಾಹನದಲ್ಲಿದ್ದ ಈರ್ವರು ಸವಾರರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ನಸುಕಿನ ಜಾವ ನಡೆದಿದೆ.

ಘಟನೆಯಲ್ಲಿ ಹಾನಗಲ್ ಮೂಲದ ಈರ್ವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ವಾಹನದಲ್ಲಿದ್ದ 6  ಜಾನುವಾರುಗಳ ಪೈಕಿ 1 ಸ್ಥಳದಲ್ಲೇ ಮೃತಪಟ್ಟಿದೆ. ಈ ವಾಹನದಲ್ಲಿ 6 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

300x250 AD

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ, 1 ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಈರ್ವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬನವಾಸಿ ಠಾಣೆಯ ಪಿಎಸ್ಐ ಚಂದ್ರಕಲಾ ಪತ್ತಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This
300x250 AD
300x250 AD
300x250 AD
Back to top