Slide
Slide
Slide
previous arrow
next arrow

ದಾಂಡೇಲಿ ಸಾರ್ವಜನಿಕ ಆಸ್ಪತ್ರೆಗೆ ಡಿಎಚ್‌ಓ ಭೇಟಿ

300x250 AD

ದಾಂಡೇಲಿ: ನಗರದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನೀರಜ್ ಭೇಟಿ ನೀಡಿ, ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ಜೊತೆ ಸಭೆ ನಡೆಸಿ, ರೋಗಿಗಳಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದರು. ಸಾರ್ವಜನಿಕ ಆಸ್ಪತ್ರೆಗೆ ಅವಶ್ಯ ಬೇಕಾದ ಔಷಧಿಯ ಪರಿಕರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ಕುಮಾರ್ ನಾಯ್ಕ ಅವರು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿ ಅತ್ಯುತ್ತಮ ಸೇವೆ ನೀಡುತ್ತಿರುವುದನ್ನು ಶ್ಲಾಘಿಸಿದರು. ಸಾರ್ವಜನಿಕ ಆಸ್ಪತ್ರೆಯ ವೈದ್ಯರುಗಳ ಮತ್ತು ಸಿಬ್ಬಂದಿಗಳ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಾರ್ವಜನಿಕ ಆಸ್ಪತ್ರೆಗೆ ಹೃದ್ರೋಗ ತಜ್ಞರನ್ನ ನೇಮಕ ಮಾಡಬೇಕು. ಅಲ್ಲಿಯವರೆಗೆ ನಗರದಲ್ಲಿರುವ ಹೃದ್ರೋಗ ತಜ್ಞರನ್ನು ಕನ್ಸಲ್ಟೆಂಟ್ ವೈದ್ಯರನ್ನಾಗಿ ನಿಯೋಜಿಸಬೇಕು. ಸಾರ್ವಜನಿಕ ಆಸ್ಪತ್ರೆಯನ್ನು ಆದಷ್ಟು ಶೀಘ್ರ ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು. ಆಸ್ಪತ್ರೆಯಲ್ಲಿ ಹಿರಿಯ ವೈದ್ಯರೊಬ್ಬರಿಂದ ನಡೆಯುತ್ತಿರುವ ಸಹಿ ಸಂಗ್ರಹಣಾ ಅಭಿಯಾನವನ್ನು ನಿಲ್ಲಿಸಿ, ಸಿಬ್ಬಂದಿಗಳ ನಡುವೆ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಅಗತ್ಯ ಮಾರ್ಗದರ್ಶನ ನೀಡಬೇಕೆಂದು ಸಾರ್ವಜನಿಕರು ಡಿಎಚ್‌ಒ ಬಳಿ ಮನವಿ ಮಾಡಿಕೊಂಡರು.

300x250 AD

ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್ ನಾಯ್ಕ, ವೈದ್ಯರಾದ ಡಾ.ರಾಜೇಶ್ ಪ್ರಸಾದ್, ಡಾ.ಅರುಣ್ ನಾಯ್ಕ, ಡಾ.ಮಂಜುನಾಥ್, ಡಾ.ಅಖಿಲ್‌ಕಿತ್ತೂರು, ಡಾ.ಕೀರ್ತಿ ಸಾಳುಂಕೆ, ನರ್ಸ್ ಅಧೀಕ್ಷಕಿ ತುಳಸಾ ಮೊದಲಾದವರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top