Slide
Slide
Slide
previous arrow
next arrow

ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಇತ್ತೀಚೆಗೆ ಜೊಯಿಡಾದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾ ಕೂಟದ ಚೆಸ್ ಮತ್ತು ಯೋಗ ವಿಭಾಗದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

7ನೇ ವರ್ಗದ ಆಯುಷ್ ನಾವಡಾ ಹಾಗೂ 8 ನೇ ವರ್ಗದ ಸಾತ್ವಿಕ ಪೂಜಾರಿ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಜ್ಯ ಮಟ್ಟಕೆ ಆಯ್ಕೆಯಾಗಿರುತ್ತಾರೆ. 6 ನೇ ವರ್ಗದ ವಿದ್ಯಾರ್ಥಿನಿ ಸಾಧನಾ ಗೌಡ ಯೋಗ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅಲ್ಲದೇ, ಹಳಿಯಾಳದಲ್ಲಿ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟದಲ್ಲಿ 10ನೇ ವರ್ಗದ ಸಿಂಚನಾ ಹೆಗಡೆ ಯೋಗ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

300x250 AD

ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕಿ ಆಶಾ ನಾಯ್ಕ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳಿಗೆ ಕಾರ್ಯದರ್ಶಿ ಎಲ್.ಎಂ.ಹೆಗಡೆ, ಅಧ್ಯಕ್ಷ ಎಸ್.ಆರ್.ಹೆಗಡೆ, ಆಡಳಿತಾಧಿಕಾರಿ ವಿದ್ಯಾ ನಾಯ್ಕ, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಪಾಲಕರು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

Share This
300x250 AD
300x250 AD
300x250 AD
Back to top