Slide
Slide
Slide
previous arrow
next arrow

ಏಷ್ಯನ್ ಗೇಮ್ಸ್: ದೇಶಕ್ಕೆ ಮೊದಲ ಚಿನ್ನ ತಂದ ಪುರುಷರ ಶೂಟಿಂಗ್‌ ತಂಡ

300x250 AD

ನವದೆಹಲಿ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ 2023ರಲ್ಲಿ ಭಾರತದ ಕ್ರೀಡಾಳುಗಳು ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ. ಚಿನ್ನದ ಪದಕ ಬೇಟೆ ಭರ್ಜರಿಯಾಗಿ ನಡೆಯುತ್ತಿದೆ, ಶೂಟಿಂಗ್­ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಲಭಿಸಿದೆ.

ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪವಾರ್, ರುದ್ರಾಂಕ್ಷ್ ಬಾಳಾಸಾಹೇಬ್ ಮತ್ತು ಐಶ್ವರ್ಯ ತೋಮರ್ ಅವರು ಭಾರತಕ್ಕೆ ಚಿನ್ನದ ಪದಕ ಜಯಿಸಿದ್ದಾರೆ. ಈ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

300x250 AD

ಎರಡನೇ ದಿನದ ಆಟದಲ್ಲಿ ಶೂಟಿಂಗ್ ಹೊರತಾಗಿಯೂ ಭಾರತ ರೋಯಿಂಗ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದೆ. 19ನೇ ಏಷ್ಯನ್ ಗೇಮ್ಸ್​ನ ಮೊದಲ ದಿನ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತ ತನ್ನ ಅಭಿಯಾನವನ್ನು ಆರಂಭಿಸಿತ್ತು. ಶೂಟಿಂಗ್‌ನಲ್ಲಿ ಮಹಿಳಾ ತಂಡ ವಿಭಾಗದಲ್ಲಿ ಭಾರತ ಆ ಪದಕ ಗೆದ್ದಿತ್ತು. ಮೊದಲ ದಿನ 3 ಬೆಳ್ಳಿ ಹಾಗೂ 2 ಕಂಚು ಗೆದ್ದಿರುವ ಭಾರತ ಎರಡನೇ ದಿನವನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಆರಂಭಿಸಿದೆ. ಇನ್ನು ಎರಡನೇ ದಿನವನ್ನು ಚಿನ್ನದ ಪದಕದೊಂದಿಗೆ ಆರಂಭಿಸಿರುವ ಭಾರತದ ಶೂಟರ್‌ಗಳು ಈ ಚಿನ್ನದ ಪದಕದೊಂದಿಗೆ ವಿಶ್ವ ದಾಖಲೆಯನ್ನೂ ಮುರಿದಿದ್ದಾರೆ.

Share This
300x250 AD
300x250 AD
300x250 AD
Back to top