Slide
Slide
Slide
previous arrow
next arrow

ಕ್ರೀಡಾಕೂಟದಲ್ಲಿ ಶಿರಸಿ ತಾಲೂಕಿನ ವಿವಿಧ ಶಾಲಾ ವಿದ್ಯಾರ್ಥಿಗಳ ಉತ್ತಮ ಸಾಧನೆ

300x250 AD

ಶಿರಸಿ : ಜೋಯಿಡಾ ತಾಲೂಕಿನ ರಾಮನಗರದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶಿರಸಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ತಾಲೂಕಿನ ಬಕ್ಕಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಿಯಾಂಕ ನಾಗರಾಜ ಭಟ್ಟ ಬಾಲಕಿಯರ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅಲ್ಲದೇ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಕೊಡಿನ ಸುಶಾಂತ ಈಶ್ವರ ಗೌಡ ಬೆಳಗಲಮನೆ ಗುಂಡು ಎಸೆತ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡು ಎರಡೂ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವರ ಸಾಧನೆಗೆ ಡಿಡಿಪಿಐ ಪಿ.ಬಸವರಾಜು, ಬಿಇಒ ನಾಗರಾಜ ನಾಯ್ಕ, ಶಿಕ್ಷಕರು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top