ಸಿದ್ದಾಪುರ: ತಾಲೂಕಿನ ಕಾನಸೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ. 29 ರಂದು ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆಡಳಿತ, ತಾಲೂಕಾ ಆರೋಗ್ಯಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ ಸಿದ್ದಾಪುರ, ಗ್ರಾಮ ಪಂಚಾಯತ ಕಾನಸೂರು ಇವರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಾನಸೂರುನಲ್ಲಿ ಆಯುಷ್ಮಾನ ಭವ ಅಭಿಯಾನದ ಅಂಗವಾಗಿ ಈ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ಹೆಚ್ಚಿನ ಸಾರ್ವಜನಿಕರು ಪಾಲ್ಗೊಳ್ಳುವಂತೆ ಕಾನಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಶ್ಮಿ ಹಿರೇಮಠ ತಿಳಿಸಿದ್ದಾರೆ.