ಶಿರಸಿ: ತಾಲೂಕಿನ ಅತಿ ದೊಡ್ಡ ಗ್ರಾ.ಪಂಗಳಲ್ಲೊಂದಾದ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಾಕಷ್ಟು ಸಾರ್ವಜನಿಕ ಸಮಸ್ಯೆ, ಕುಂದು-ಕೊರತೆಗಳಿದ್ದು, ತಹಸೀಲ್ದಾರರು ಈ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಹೂಡಿ, ಇಲ್ಲಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ, ಸ್ಥಳೀಯರು ಮನವಿ ಸಲ್ಲಿಸಿದ್ದಾರೆ.
ಬದನಗೋಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 12000 ಕ್ಕೂ ಅಧಿಕ ಜನ ಸಂಖ್ಯೆಯಿದ್ದು, ಸಾಕಷ್ಟು ಸಾರ್ವಜನಿಕ ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸ್ಥಳೀಯರು 2018 ರಿಂದಲೂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ, ಇಲ್ಲಿನ ಕುಂದು-ಕೊರತೆಗಳ ಬಗ್ಗೆ ಚರ್ಚಿಸಲು ಯಾವುದೇ ಸಭೆ ನಡೆದಿಲ್ಲ. ಇದರಿಂದ ಇಲ್ಲಿನ ಸಮಸ್ಯೆಗಳು ಹಾಗೆಯೇ ಉಳಿದಿವೆ. ಆದ್ದರಿಂದ ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿ, ಇಲ್ಲಿನ ಸಮಸ್ಯೆ, ಕುಂದುಕೊರತೆಗಳನ್ನು ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಯುವರಾಜ ಜೆ. ಗೌಡ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.