ಶಿರಸಿ: ಕಾವೇರಿ ನಿಯಂತ್ರಣ ಮಂಡಳಿ ಹಾಗೂ ಪ್ರಾಧಿಕಾರವು ಸುಪ್ರೀಂಕೋರ್ಟ್ ಗೆ ಕರ್ನಾಟಕದ ಸಂಕಷ್ಟ ಪರಿಸ್ಥಿತಿ ಮನವರಿಕೆ ಮಾಡಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಕದಂಬಸೈನ್ಯದ ಸಂಸ್ಥಾಪಕ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರು, ಶಾಸಕರು, ಸಂಸದರು ಕಾವೇರಿ ವಿವಾದ ಬಗೆಹರಿಸಲು ವಿಫಲವಾಗಿದ್ದು, ಉನ್ನತ ಅಧಿಕಾರಿಗಳು ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಕಾವೇರಿ ನೀರು ಸಂಕಷ್ಟ ಸೂತ್ರ ಮತ್ತು ರಾಷ್ಟ್ರೀಯ ವೈಜ್ಞಾನಿಕ ಜಲ ನೀತಿ ರೂಪಿಸುವಂತೆ ಮಧ್ಯಸ್ಥಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೋಲು ಎಂದು ಕರೆಯುವುದಕ್ಕಿಂದ ಕರ್ನಾಟಕದ ರಾಜಕೀಯ ಇಚ್ಛಾಶಕ್ತಿಯ ಸೋಲು. ಕಾವೇರಿ ವಿಷಯದಲ್ಲಿ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕಾವೇರಿ ನೀರು ಸಂಕಷÀ್ಟ ಸೂತ್ರ ರಚಿಸುವಂತೆ ಮಾಡಬೇಕಿದೆ. ಒಂದು ಎಕರೆಗೆ 25 ಸಾವಿರ ರೂ.ಪರಿಹಾರ ಘೋಷಣೆ ಮಾಡಬೇಕಿದೆ. ಕಾವೇರಿ, ಮಹದಾಯಿ, ಕೃಷ್ಣ ಪ್ರತಿಯೊಬ್ಬ ಕನ್ನಡಿಗನ ಹೃದಯಬಡಿತವಾಗಬೇಕು ಎಂದರು.
ಪ್ರಸಕ್ತ ವರ್ಷದಲ್ಲಿ ಮಳೆ ಕೊರತೆಯಿಂದ ಬೆಳೆ ಉಳಿಸಿಕೊಳ್ಳಲು ರೈತರು ಪರಿತಪಿಸುತ್ತಿದ್ದಾರೆ. ಕಾವೇರಿ ನೀರು ತಮಿಳುನಾಡಿಗೆ ಬಿಡುವುದರಿಂದ 8 ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುತ್ತದೆ. ಕಾವೇರಿ ನಮ್ಮದು ಎಂಬ ದಿಟ್ಟ ನಿರ್ಧಾರ ಕೈಗೊಂಡು ನೀರು ಬಿಡುವುದನ್ನು ಸ್ಥಗಿತಗೊಳಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಕಾವೇರಿ ನಿರ್ವಹಣಾ ಪ್ರಾಧಿಕಾರವು 3 ಟಿ.ಎಂ.ಸಿ ನೀರು ತಮಿಳುನಾಡಿಗೆ ಬಿಡಲು ಸೂಚನೆ ನೀಡಿದೆ. ನಮ್ಮ ರಾಜ್ಯವು ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನೀರು ಬಿಟ್ಟರೆ 2 ತಿಂಗಳಿನಲ್ಲಿ ಕಾವೇರಿ ಬರಿದಾಗುತ್ತದೆ. ಮುಂದು ಏನು ಎಂಬ ಭಯ ಕಾಡುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ರೈತರು ಸಂಕಷ್ಟಕ್ಕೆ ಸಿಲುಕಿರುವಾಗ ಕನ್ನಡ ಚಲನಚಿತ್ರರಂಗದ ನಟ-ನಟಿಯರು, ಕಿರುತೆರೆ ರಂಗದವರು ತಮಗೆ ಸಂಬಂಧಪಟ್ಟ ವಿಷಯವೇ ಅಲ್ಲ ಎಂದು ಮೌನವಾಗಿದ್ದಾರೆ. ಹೋರಾಟಕ್ಕೆ ಇಳಿಯಬೇಕು.ಚಿತ್ರರಂಗದವರು ಕನ್ನಡ ವಿರೋಧಿತನ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಡಾ.ದೇವನಹಳ್ಳಿ ದೇವರಾಜ, ರಾಜ್ಯ ಸಂಚಾಲಕ ಮೋಹನದಾಸ ನಾಯಕ, ಜಿಲ್ಲಾ ಸಂಚಾಲಕ ಪುರಂದರ ನಾಯ್ಕ, ಮೈಸೂರು ಜಿಲ್ಲಾ ಸಮಿತಿ ಸದಸ್ಯ ಪುಟ್ಟಸ್ವಾಮಿ, ಮಂಡ್ಯ ಜಿಲ್ಲಾ ಸಮಿತಿ ಸದಸ್ಯ ಜೋಸೆಫ್ ರಾಮು ಇದ್ದರು.