Slide
Slide
Slide
previous arrow
next arrow

ಅ.1ಕ್ಕೆ ‘ಬೃಹತ್ ಸ್ವಚ್ಛತಾ ಅಭಿಯಾನ’

300x250 AD

ಕಾರವಾರ: ಮಹಾತ್ಮ ಗಾಂಧೀಜಿಯವರ ಜನ್ಮ ದಿನದ ಅಂಗವಾಗಿ ಭಾರತ ಸರ್ಕಾರವು ‘ಸ್ವಚ್ಛತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ’ ಎಂಬ ‘ಬೃಹತ್ ಸ್ವಚ್ಛತಾ ಅಭಿಯಾನ’ವನ್ನು ಅ.1ರಂದು ಬೆಳಗ್ಗೆ 10 ಗಂಟೆಗೆ ಎಲ್ಲಾ ಗ್ರಾಮ ಪಂಚಾಯತಿಯಲ್ಲಿನ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಸ್ವಚ್ಚತಾ ಶ್ರಮದಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈ ಆಂದೋಲನದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಧಾನ ಮಂತ್ರಿಗಳು ಮತ್ತು ಇತರ ಗಣ್ಯರು ಸಹ ಭಾಗವಹಿಸಲಿದ್ದಾರೆ.

ಜಿಲ್ಲೆಯಲ್ಲಿನ ಗ್ರಾಮ ಪಂಚಾಯತಿಯ 247 ಆಯ್ದ ಸ್ಥಳಗಳನ್ನು ಆಯ್ಕೆ ಮಾಡಿ http://swachhatahiseva.comನಲ್ಲಿ ಅಳವಡಿಸಲಾಗಿದೆ. ಬ್ರಹತ್ ಸ್ವಚ್ಛತಾ ಶ್ರಮದಾನವನ್ನು ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು http://swachhatahiseva.comನಲ್ಲಿ ಹೆಸರು ನೊಂದಾಯಿಸಿಕೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top