ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 1ರಿಂದ 10ನೇ ಪ್ರಿ-ಮೆಟ್ರಿಕ್ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಸ್ಟೇಟ್ ಸ್ಕಾಲರ್ಶಿಪ್ ಫೋರ್ಟ್ಲ್ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೊಸದಾಗಿ ನೋಂದಣಿಗೆ https://ssp.karnataka.gov.in/ssp2324/homenew.aspx ನವೀಕರಣಕ್ಕಾಗಿ https://ssp.karnataka.gov.in/ssp2324/signin.aspx ಮಾಡಲು ಕಡ್ಡಾಯವಾಗಿ ಯುಡಿಐಡಿವುಳ್ಳ ವಿಕಲಚೇತನ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಸ್ವೀಕೃತಿಯನ್ನು ಎಲ್ಲಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಮುಂಡಗೋಡ, ಜೋಯಿಡಾ ಹಾಗೂ ತಾಲೂಕಿನ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು ತಾಲೂಕ ಪಂಚಾಯತ್ ಸಿದ್ದಾಪುರ, ಯಲ್ಲಾಪುರ, ಹಳಿಯಾಳ ರವರನ್ನು ಹಾಗೂ ಜಿಲ್ಲಾ ವಿಕಲಚೇತನರ ಕಛೇರಿ, ಜಿಲ್ಲಾ ಬಾಲಭವನ ಬಿಲ್ಡಿಂಗ್, ಎಂ.ಜಿ.ರಸ್ತೆ, ಉತ್ತರಕನ್ನಡ ಕಚೇರಿಗೆ ಸಲ್ಲಿಸಬೇಕು ಹಾಗೂ ಆಯಾ ತಾಲೂಕಿನ ವಿವಿದ್ದೋದೇಶ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:Tel:+9108382200758 ಗೆ ಸಂಪರ್ಕಿಸಬಹು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ