Slide
Slide
Slide
previous arrow
next arrow

ಚೆಸ್ ಸ್ಪರ್ಧೆ: ಮಾರಿಕಾಂಬಾ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

300x250 AD

ಶಿರಸಿ: ಇಲ್ಲಿನ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಚೆಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಳಿಯಾಳದಲ್ಲಿ ನಡೆದ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅವರು ನಡೆಸಿದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಶ್ರೀ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಮಾನಸ ರ. ಗಾಂವ್ಕರ್ ದ್ವಿತೀಯ ಸ್ಥಾನ ಹಾಗೂ ಪರಾಶರ್ ಕಿರಣ್ ನಾಯ್ಕ ಚತುರ್ಥ ಸ್ಥಾನ 14 ವರ್ಷವಯೋಮಿತಿಯ ಒಳಗಿನ ನಿಖಿತಾ ಗುನಗಾ ತೃತೀಯ ಸ್ಥಾನ ಪಡೆಯುವುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

300x250 AD

ವಿದ್ಯಾರ್ಥಿಗಳಿಗೆ ಎಸ್. ಡಿ.ಎಂ. ಸಿ.ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಹಾಗೂ ಉಪಪ್ರಚಾರ ಯಜ್ಞೇಶ್ವರ ಆರ್ ನಾಯ್ಕ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಸ್ಪರ್ಧೆಯಲ್ಲಿ ವಿಜೇತರಾದ 1 ರಿಂದ 5 ಸ್ಥಾನದರವರೆಗೆ ರಾಜ್ಯಮಟ್ಟಕ್ಕೆ ಆಯ್ಕೆ ಇದೆ. ಒಂದು ಜಿಲ್ಲೆಯಿಂದ ಐದು ಇದು ವಿದ್ಯಾರ್ಥಿಗಳಿಗೆ ಅವಕಾಶ ಲಭಿಸಲಿದೆ ಎಂಬುದು ಉಲ್ಲೇಖನೀಯ.

Share This
300x250 AD
300x250 AD
300x250 AD
Back to top