Slide
Slide
Slide
previous arrow
next arrow

ಇಕೋ ಕೇರ್ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆ ಯಶಸ್ವಿ

300x250 AD

ಶಿರಸಿ:ಇಲ್ಲಿನ ಇಕೋ ಕೇರ್ (ರಿ.) ಸಂಸ್ಥೆಯ ಕಚೇರಿಯಲ್ಲಿ ಇತ್ತೀಚೆಗೆ ವಾರ್ಷಿಕ ಸರ್ವ ಸಾಧಾರಣ ಸಭೆ ನಡೆಯಿತು. ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದ ಡಾ.ರಾಜೇಶ್ ಡಿ ನಾಯ್ಕ್ ಮಾತನಾಡಿ ಕಡಿಮೆ ಅವಧಿಯಲ್ಲಿ ಸಂಸ್ಥೆಯ ಕಾರ್ಯ ಚಟುವಟಿಕಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಂಸ್ಥೆಯು 2022-23 ನೇ ಸಾಲಿನ ವಾರ್ಷಿಕ ಅಡಾವೆ ಪತ್ರಿಕೆಯನ್ನು ಸಂಸ್ಥೆಯ ಕಾರ್ಯದರ್ಶಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದರು. ಕಳೆದ ಸಾಲಿನಲ್ಲಿ ನಡೆದ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಸಂಸ್ಥೆಯ ಮುಂದಿನ ಕಾರ್ಯ ಯೋಜನೆಯ ನೀಲನಕ್ಷೆ ಸಿದ್ದಪಡಿಸಲಾಯಿತು.

ಇಕೋ ಕೇರ್ ಸಂಸ್ಥೆಯ ಅಧ್ಯಕ್ಷರಾದ ಸುನೀಲ ಭೋವಿಯವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ (ರಿ ) ಜಿಲ್ಲಾ ಶಾಖೆ: ಉತ್ತರ ಕನ್ನಡದ ಅಧ್ಯಕ್ಷರಾದ ಮಹೇಶ್ ಡಿ.ನಾಯಕ ಸಾಮಾಜಿಕ ಕಾರ್ಯಕ್ರಮ ನಡೆಸಲು ಸದಸ್ಯರಿಗೆ ಉಪನ್ಯಾಸ ನೀಡಿದರು. ಸಭಾ ಕಾರ್ಯಕ್ರಮವನ್ನು ರಮೇಶ ನಾಯ್ಕ್ ನಡೆಸಿಕೊಟ್ಟು ಸಹಕರಿಸಿದರು. ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top