ಕುಮಟಾ: ತಾಲ್ಲೂಕು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ಶಾಂತಾರಾಮ ಗಣಪತಿ ನಾಯ್ಕ ಹೆಗಡೆ ಹಾಗೂ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ
ಹನುಮಂತ ಮಾಸ್ತಿ ಪಟಗಾರ ಊರಕೇರಿ ಇವರನ್ನು ನೇಮಕ ಮಾಡಿ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ಆದೇಶ ನೀಡಿದ್ದಾರೆ.
ಕಾಂಗ್ರೆಸ್ ಮುಖಂಡ ನಿವೇದಿತ ಆಳ್ವ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ ಇವರುಗಳ ಸೂಚನೆಯಂತೆ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರ ಅನುಮೋದನೆ ಪಡೆದು ಸದರಿ ನೇಮಕ ಮಾಡಲಾಗಿದ್ದು, ನೇಮಕಗೊಂಡ ಪದಾಧಿಕಾರಿಗಳು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ತಿಳಿಸಲಾಗಿದೆ.