Slide
Slide
Slide
previous arrow
next arrow

ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಕಾರ್ಯಪಡೆ ರಚನೆ

300x250 AD

ಹೊನ್ನಾವರ: ಪಾರಂಪರಿಕ ಅರಣ್ಯವಾಸಿಗಳ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಯ ಮೂಲ ಉದ್ದೇಶಕ್ಕೆ ಕೊಡಲಿ ಏಟು ನೀಡುವಂತೆ ರಾಜ್ಯದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬAಧಿಸಿ ಕಾರ್ಯಪಡೆ ರಚಿಸುವ ರಾಜ್ಯದ ಅರಣ್ಯ ಸಚಿವರ ವಿವೇಚನಾ ರಹಿತ ನಿರ್ಧಾರ ಮತ್ತು ಟಿಪ್ಪಣಿಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಕಾಂಗ್ರೆಸ್ಸಿನ ಹಿರಿಯ ಧುರೀಣ ಮತ್ತು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಕಾAತ ಕೊಚರೇಕರ ಅವರು ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರನ್ನು ಆಗ್ರಹಪಡಿಸಿದ್ದಾರೆ.

ಈ ಸಂಬ0ಧ ಮುಖ್ಯಮಂತ್ರಿಗಳಿಗೆ, ಅರಣ್ಯ ಮತ್ತು ಸಮಾಜ ಕಲ್ಯಾಣ ಸಚಿವರಿಗೆ ಪತ್ರ ಬರೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿರುವ ಅವರು, ವಸತಿ ಮತ್ತು ಜೀವನೋಪಾಯಕ್ಕಾಗಿ ಅರಣ್ಯ ಭೂಮಿಯಲ್ಲಿ ಬದುಕನ್ನು ಕಟ್ಟಿಕೊಂಡಿರುವ ರಾಜ್ಯದ ಮೂರು ಲಕ್ಷ ಬಡಕುಟುಂಬಗಳ ಹಿತದೃಷ್ಟಿಯಿಂದ ಅರಣ್ಯ ಸಚಿವರ ಈ ವಿವೇಚನಾ ರಹಿತ ನಿರ್ಧಾರವನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ರಾಜ್ಯದಲ್ಲಿ ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಿಸಿ ೨೦೦೫ರ ಪೂರ್ವದ ಬಗರ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಸಚಿವ ರನ್ನು ಆಗ್ರಹ ಪಡಿಸಿದ್ದಾರೆ.ಎಲ್ಲಾ ರೀತಿಯ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯ ಮಟ್ಟದ ಕಾರ್ಯಪಡೆ ರಚಿಸುವ ಅರಣ್ಯ ಸಚಿವರ ಟಿಪ್ಪಣಿಯು ರಾಜ್ಯದ ಜನರಲ್ಲಿ ಆತಂಕ ಮೂಡಿಸುವಂಥದ್ದು. ಇದೊಂದು ವಿವೇಚನಾ ರಹಿತ ಕ್ರಮ ಎಂದು ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

300x250 AD

ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವವರೆಗೆ ಅರಣ್ಯ ಭೂಮಿ ಯಲ್ಲಿನ ಎಲ್ಲಾ ರೀತಿಯ ಒತ್ತುವರಿಯನ್ನು ತೆರವುಗೊಳಿಸಲು ಉದ್ದೇಶಿತ ರಾಜ್ಯ ಮಟ್ಟದ ಕಾರ್ಯಪಡೆ ರಚಿಸುವ ಸಂಬ0ಧದ ಮಾನ್ಯ ಅರಣ್ಯ ಸಚಿವರ ನಿರ್ಧಾರವನ್ನು ಮತ್ತು ಅಧಿಕಾರಿಗಳಿಗೆ ಬರೆದಿರುವ ಟಿಪ್ಪಣಿಯನ್ನು ಕೂಡಲೇ ಹಿಂದಕ್ಕೆ ಪಡೆಯುವಂತೆ ಮತ್ತು ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಯಡಿ ಕ್ಲೇಮು ಸಲ್ಲಿಕೆಯಾಗಿರುವ ೨೦೦೫ರ ಪೂರ್ವದ ಅರಣ್ಯ ಭೂಮಿಯಲ್ಲಿನ ಬಗರ ಹುಕುಮ್ ಸಾಗುವಳಿದಾರರ ಹಿತರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚಂದ್ರಕಾ0ತ ಕೊಚರೇಕರ ರಾಜ್ಯ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ. ಅಧಿಕಾರವಿದ್ದಾಗ ಬಗರ್‌ಹುಕ್ಕುಂ ಸಾಗುವಳಿದಾರರ ಸಮಸ್ಯೆಗಳಿಗೆ ಸ್ಪಂದಿಸದೇ ಇರುವವರ ಬಗ್ಗೆ ಹಾಗೂ ಕೇವಲ ರಾಜಕೀಯಕ್ಕಾಗಿ ಚುನಾವಣೆ ಸಂದರ್ಭದಲ್ಲಿ ಮಾತ್ರ ಮೊಸಳೆ ಕಣ್ಟೀರು ಸುರಿಸುವವರಿಂದಾಗಿ ಈ ಸಮಸ್ಯೆ ಇಷ್ಟು ವರ್ಷ ಹಾಗೇ ಉಳಿದುಕೊಂಡಿದೆ. ಎಂದು ಜಿಲ್ಲೆಯ ರಾಜಕಾರಣದ ಬಗ್ಗೆ ಅವರು ತಮ್ಮ ಬೇಸರವನ್ನ ವ್ಯಕ್ತಪಡಿಸಿದ್ದಾರೆ.

Share This
300x250 AD
300x250 AD
300x250 AD
Back to top