Slide
Slide
Slide
previous arrow
next arrow

ಸ್ಕೊಡ್‌ವೆಸ್‌ನಿಂದ ಸ್ವಚ್ಛತಾ ಕಾರ್ಯಕ್ರಮ

300x250 AD

ಶಿರಸಿ: ಪ್ರತಿಷ್ಠಿತ ಸ್ಕೊಡ್‌ವೆಸ್ ಸಂಸ್ಥೆ ವತಿಯಿಂದ ಸೋಮವಾರ ಮರಾಠಿಕೊಪ್ಪ ಮುಖ್ಯರಸ್ತೆ ಹಾಗೂ ಮಾರುತಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮರಾಠಿಕೊಪ್ಪ ಮುಖ್ಯರಸ್ತೆ ಹಾಗೂ ಮಾರುತಿ ದೇವಸ್ಥಾನದ ಇಕ್ಕೆಲಗಳಲ್ಲಿ ಬಿದ್ದಿರುವ ಕಸ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಸಂಗ್ರಹಿಸಿ, ರಸ್ತೆ ಹಾಗೂ ದೇವಾಲಯದ ಅವಾರವನ್ನು ಸ್ವಚ್ಛಗೊಳಿಸಲಾಯಿತು.

300x250 AD

ಈ ಕಾರ್ಯದಲ್ಲಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಸೇರಿದಂತೆ ಸಂಸ್ಥೆಯ ಎಲ್ಲ ಸಿಬ್ಬಂದಿಗಳು ಭಾಗಿಯಾಗಿದ್ದರು.

Share This
300x250 AD
300x250 AD
300x250 AD
Back to top