Slide
Slide
Slide
previous arrow
next arrow

ಲಯನ್ಸ್ ಶಾಲೆಯಲ್ಲಿ ದೇಶ ಕಂಡ ಧೀಮಂತ ನಾಯಕರ ಜನ್ಮ ದಿನ ಆಚರಣೆ

300x250 AD

ಶಿರಸಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜನ್ಮದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಲಯನ್ಸ್ ಶಾಲಾ ಆವರಣದಲ್ಲಿ ಆಚರಿಸಲಾಯಿತು.

ಶಾಲೆಯ ಸಂಗೀತ ಶಿಕ್ಷಕಿ ದೀಪಾ ಶಶಾಂಕ ಮತ್ತು ಮುಕ್ತಾ ನಾಯ್ಕ ಇವರ ನೇತತ್ವದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ. ರವಿ ನಾಯಕ ವಿದ್ಯಾರ್ಥಿಗಳಿಗೆ ಲಾಲ್ ಬಹದ್ದೂರ್ ಶಾಸ್ತ್ರಿಜಿ  ಹಾಗೂ ಮಹಾತ್ಮ ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಪಾಲಿಸುತ್ತ ಉತ್ತಮ ನಾಗರಿಕರಾಗಿ ಬಾಳೋಣ ಎಂಬ ಸಂದೇಶವನ್ನು ನೀಡಿದರು. 

300x250 AD

ಲಯನ್ಸ್ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಶಶಾಂಕ ಹೆಗಡೆ ಸ್ವಾಗತಿಸಿದರು. ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಜ್ಯೋತಿ ಅಶ್ವಥ ಹೆಗಡೆ, ಖಜಾಂಚಿ ಶರಾವತಿ ಹೆಗಡೆ  ಮತ್ತು ಲಯನ್ಸ್ ಕ್ಲಬ್ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಲಯನ್ಸ್  ಪದಾಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು  ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿದರು. 

ReplyForward
Share This
300x250 AD
300x250 AD
300x250 AD
Back to top